ಕರೆಮ್ಮ ಜಿ. ನಾಯಕ್ ಕಾರು ಭೀಕರ ಅಪಘಾತ: ದೇವದುರ್ಗ ಶಾಸಕಿ ಪ್ರಾಣಾಪಾಯದಿಂದ ಪಾರು

Sampriya
ಭಾನುವಾರ, 12 ಅಕ್ಟೋಬರ್ 2025 (12:08 IST)
Photo Courtesy X
ರಾಯಚೂರು: ಜೆಡಿಎಸ್ ಪಕ್ಷದ ಶಾಸಕಿ ಕರೆಮ್ಮಾ ನಾಯಕ್ ಅವರು ಪ್ರಯಾಣಿಸುತ್ತಿದ್ದ ಕಾರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. 

ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಾಸಕಿ ತೆರಳಿದ್ದಾರೆ.

ಶಾಸಕರು ತೆರಳುತ್ತಿದ್ದ ವೇಳೆ ಕಾರಿನ ಮುಂಬದಿ ಇದ್ದ ಮತ್ತೊಂದು ಕಾರಿಗೆ ನಾಯಿ ಅಡ್ಡ ಬಂದಿದೆ. ನಾಯಿ ತಪ್ಪಿಸಲು ಕಾರಿನ ಚಾಲಕ ಯತ್ನಿಸಿದ್ದು, ರಸ್ತೆ ಪಕ್ಕದ ಗುಡ್ಡಕ್ಕೆ ಕಾರು ಡಿಕ್ಕಿಯಾಗಿದೆ. ಹಿಂದೆಯೇ ಶಾಸಕರಿದ್ದ ಕಾರು ಕೂಡ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ. 

ಘಟನೆಯಲ್ಲಿ ಜಖಂಗೊಂಡಿರುವ ಎರಡು ಕಾರುಗಳು ಕೂಡ ಕರೆಮ್ಮಾ ನಾಯಕ್ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಶಾಸಕಿ ಕರೆಮ್ಮಾ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಸ್ಥಳಕ್ಕೆ ಲಿಂಗಸ್ಗೂರು ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸ್ಥಳೀಯ ತಹಶೀಲ್ದಾರ್ ಭೇಟಿ ನೀಡಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments