Daily Horoscope

ಕಾರ್ಕಳ ರೇಪ್ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಕಾರ್ಯಕರ್ತನೇ ಶಾಮೀಲು

Krishnaveni K
ಮಂಗಳವಾರ, 27 ಆಗಸ್ಟ್ 2024 (14:03 IST)
Photo Credit: Facebook
ಕಾರ್ಕಳ: ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವತಿಯನ್ನು ಭೇಟಿಯಾಗಿ ಆಕೆಗೆ ಮತ್ತು ಬರಿಸುವ ಔಷಧಿ ಹಾಕಿದ ಜ್ಯೂಸ್ ನೀಡಿ ರೇಪ್ ಮಾಡಿದ್ದ ಆರೋಪಿ ಅಲ್ತಾಫ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನೇ ಭಾಗಿಯಾಗಿರುವ ಬಗ್ಗೆ ವರದಿಯಾಗಿದೆ.

ಅದರಲ್ಲೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಆಪ್ತವಲಯದಲ್ಲಿದ್ದ ಬಿಜೆಪಿ ಕಾರ್ಯಕರ್ತ ಅಭಯ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈತ ಸುನಿಲ್ ಕುಮಾರ್ ಅಭಿಮಾನಿ, ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತ ಎಂದು ತಿಳಿದುಬಂದಿದೆ.

ಘಟನೆ ನಡೆದ ಸಂದರ್ಭದಲ್ಲಿ ಶಾಸಕ ವಿ ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಈಗ ತಮ್ಮ ಆಪ್ತನೇ ಪ್ರಕರಣದಲ್ಲಿ ಭಾಗಿಯಾಗಿರುವುದು ಅವರಿಗೆ ತೀವ್ರ ಮುಜುಗರವುಂಟು ಮಾಡಿದೆ. ಇದೀಗ ಆರೋಪಿ ಅಭಯ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಲ್ತಾಫ್ ಗೆ ಡ್ರಗ್ಸ್ ತಂದುಕೊಟ್ಟಿದ್ದ ಮತ್ತು ಕೃತ್ಯದ ಬಳಿಕ ತಪ್ಪಿಸಿಕೊಳ್ಳಲು ಇದೇ ಅಭಯ್ ಸಹಾಯ ಮಾಡಿದ್ದ ಎನ್ನಲಾಗಿದೆ. ಈತನನ್ನು ಕಾರ್ಕಳ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಬಿಜೆಪಿಗೆ ತೀವ್ರ ಮುಜುಗರ ತಂದಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments