Webdunia - Bharat's app for daily news and videos

Install App

ಕಾರ್ಕಳ: ನಕಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಅರೆಸ್ಟ್‌

Sampriya
ಸೋಮವಾರ, 11 ನವೆಂಬರ್ 2024 (15:54 IST)
Photo Courtesy X
ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಅವರನ್ನು ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ.

ಬಾರೀ ಚರ್ಚೆಗೆ ಕಾರಣವಾಗಿದ್ದ ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ ಅವ್ಯವಹಾರ ಸಂಬಂಧ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವರು ದೂರು ನೀಡದ್ದರು.

ಆರೋಪಿ ಕೃಷ್ಣ ನಾಯ್ಕ್ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕ್ರಿಶ್ ಆರ್ಟ್ ವರ್ಲ್ಡ್‌ನ ಕೃಷ್ಣ ನಾಯ್ಕ್‌ಗೆ ಮೂರ್ತಿ ನಿರ್ಮಾಣದ ಹೊಣೆ ಹೊರಿಸಲಾಗಿತ್ತು. ಆದರೆ ಶಿಲ್ಪಿ ಕೃಷ್ಣ ನಾಯಕ್ ಅವರು ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ಆರೋಪ ಕೇಳಿಬಂದಿತ್ತು.

ಉಡುಪಿ ನ್ಯಾಯಾಲಯ ಕೃಷ್ಣ ನಾಯಕ್ ಅವರ ಜಾಮೀನು ತಿರಸ್ಕರಿಸಿತ್ತು. ಜಾಮೀನು ತಿರಸ್ಕಾರ ಬೆನ್ನಲ್ಲೇ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಇದೀಗ, ಕಾರ್ಕಳ ಠಾಣೆ ಪೊಲೀಸರು ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಬಂಧಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments