Webdunia - Bharat's app for daily news and videos

Install App

ಟ್ರಕ್-ಮ್ಯಾಕ್ಸಿಕ್ಯಾಬ್‌ ಮಧ್ಯೆ ಭೀಕರ ಅಪಘಾತ : 12 ಪ್ರಯಾಣಿಕರ ಸಾವು

Webdunia
ಶುಕ್ರವಾರ, 19 ಫೆಬ್ರವರಿ 2016 (17:39 IST)
ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಟ್ರಕ್ ಮತ್ತು ಮ್ಯಾಕ್ಸಿ ಕ್ಯಾಬ್ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿದಂತೆ 12 ಜನರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
 
ಚಿತ್ರದುರ್ಗದಿಂದ ಹತ್ತಿರದಲ್ಲಿರುವ ಚಿಕ್ಕಗೋದನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
 
ಘಟನೆಯಲ್ಲಿ ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.   
 
16 ಟನ್ ಕಬ್ಬಿಣದ ರಾಡ್‌ಗಳನ್ನು ಹೊತ್ತು ತರುತ್ತಿದ್ದ ಟ್ರಕ್, ನಿಯಂತ್ರಣ ಕಳೆದುಕೊಂಡು ಕ್ಯಾಬ್ ಮೇಲೆ ನುಗ್ಗಿದ್ದರ ಪರಿಣಾಮವಾಗಿ ಕ್ಯಾಬ್‌ನಲ್ಲಿದ್ದ 13 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
 ಉತ್ತರಪ್ರದೇಶ ಮೂಲದ ಟ್ರಕ್ ಮಾಲೀಕ ಮತ್ತು ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಟ್ರಕ್ ಚಾಲಕ ಅಚ್ಚರಿ ರೀತಿಯಲ್ಲಿ ಬದುಕುಳಿದಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಅಂಚೇತ್ ತಿಳಿಸಿದ್ದಾರೆ.
 
ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಮರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments