ಬೆಂಗಳೂರು: ಈ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದೇ ಪ್ರಕಟವಾಗಲಿದೆ. ಇಂದು ಎಷ್ಟು ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ, ಎಲ್ಲಿ ಫಲಿತಾಂಶ ವೀಕ್ಷಿಸಬೇಕು ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆಗಳು ಈ ಬಾರಿ ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆಸಲಾಗಿತ್ತು. ಇದು ಪರೀಕ್ಷೆ-1 ಆಗಿದ್ದು ಇದರ ಫಲಿತಾಂಶ ಇಂದು ಅಂದರೆ ಏಪ್ರಿಲ್ 8 ರಂದು ಮಧ್ಯಾಹ್ನ 12.30 ಗಂಟೆಗೆ ಪ್ರಕಟವಾಗಲಿದೆ.
ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಮುಕ್ತಾಯವಾಗಿದ್ದು ಇಂದು ಮಧ್ಯಾಹ್ನ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಘೋಷಿಸಲಿದ್ದಾರೆ.
ಫಲಿತಾಂಶ ವೀಕ್ಷಣೆ ಎಲ್ಲಿ?
ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್ ಲೈನ್ ಮೂಲಕ ಪರಿಶೀಲಿಸಿ, ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
https://karresults.nic.in ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ. ಆನ್ ಲೈನ್ ನಲ್ಲಿ ಮಧ್ಯಾಹ್ನ 1.30 ರ ನಂತರ ಫಲಿತಾಂಶ ವೀಕ್ಷಣೆಗೆ ಲಭ್ಯವಿರಲಿದೆ.