Publish Date: Tue, 24 Oct 2017 (18:01 IST)
Updated Date: Tue, 24 Oct 2017 (18:03 IST)
ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಫಿಕ್ಸ್ ಆಗಿದ್ದು, ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಕರ್ನಾಟಕ ಸರಕಾರದ ಅಧಿಕಾರವಧಿ ಮೇ 5 ರಂದು ಮುಕ್ತಾಯಗೊಳ್ಳಲಿರುವುದರಿಂದ ಮೇ 2 ರಂದು ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ ಎನ್ನಲಾಗಿದೆ.
ಎಸ್‌ಎಸ್‌ಎಲ್‌ಸಿ, ಸಿಇಟಿ ಪರೀಕ್ಷೆಗೆ ಮುಂಚಿತವಾಗಿಯೇ ವಿಧಾನಸಭೆಗೆ ಚುನಾವಣೆ ನಡೆಸಬೇಕು ಎನ್ನುವ ಉದ್ದೇಶದಿಂದ ಮೇ 2 ರಂದು ಚುನಾವಣೆ ನಡೆಸಲು ಕೇಂದ್ರ ಚುನಾವಣೆ ಆಯೋಗ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಈಗಾಗಲೇ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರಾಜಕೀಯ ಪಕ್ಷಗಳು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.