Publish Date: Thu, 05 Apr 2018 (13:17 IST)
Updated Date: Thu, 05 Apr 2018 (13:19 IST)
ಬೆಂಗಳೂರು: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ಇಂದು ತಮಿಳುನಾಡು ಬಂದ್ ಗೆ ಡಿಎಂಕೆ ಕರೆ ಕೊಟ್ಟಿದ್ದರೆ, ಇತ್ತ ಕರ್ನಾಟಕದಲ್ಲಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ.
ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಜಲ ನಿರ್ವಹಣಾ ಮಂಡಳಿ ರಚನೆ ಮಾಡಲು ಅವಕಾಶ ಬಿಡುವುದಿಲ್ಲ. ಅದಕ್ಕಾಗಿ ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದೇವೆ ಎಂದಿದ್ದಾರೆ.
ತಮಿಳುನಾಡು ಸರ್ಕಾರ ಇಂದಿನ ಬಂದ್ ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಒಂದು ವೇಳೆ ಡಿಎಂಕೆ ಪ್ರತಿಭಟನೆಗೆ ಮಣಿದು ಜಲ ನಿರ್ವಹಣಾ ಮಂಡಳಿ ರಚನೆಗೆ ಮುಂದಾದರೆ ಕರ್ನಾಟಕದಲ್ಲಿ ರಜನಿ, ಕಮಲ್ ಸೇರಿದಂತೆ ತಮಿಳು ಚಿತ್ರಗಳ ಬಿಡುಗಡೆ ಅವಕಾಶ ಕೊಡಲ್ಲ. ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ