Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್: ಮಂಡ್ಯದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

ಕರ್ನಾಟಕ ಬಂದ್: ಮಂಡ್ಯದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್
ಮಂಡ್ಯ , ಶುಕ್ರವಾರ, 9 ಸೆಪ್ಟಂಬರ್ 2016 (13:39 IST)
ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿದ ಪ್ರತಿಭಟನಾಕಾರರ ಗುಂಪಿನ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಿದ್ದಾರೆ.
 
ಕೆಆರ್‌ಎಸ್ ಡ್ಯಾಂಗೆ ಮುತ್ತಿಗೆ ಹಾಕಲು ಯತ್ನಿಸಿದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಲ್ಲದೇ ಪರಿಸ್ಥಿತಿಯನ್ನು ತಿಳಿಗೊಳಿಸಲು ಅಶ್ರುವಾಯ ಶೆಲ್‌ಗಳನ್ನು ಸಿಡಿಸಿದ ಘಟನೆ ನಡೆದಿದೆ.
 
ರಾಜ್ಯ ಸರಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುತ್ತಿಲ್ಲ. ಆದ್ದರಿಂದ ನಾವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುತ್ತೇವೆ ಎಂದು ಸಾವಿರಾರು ಪ್ರತಿಭಟನಾಕಾರರು ಡ್ಯಾಂಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ.
 
ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಸಂಘರ್ಷವಾಗಿದ್ದಲ್ಲಿ ಬಹುದೊಡ್ಡ ಅನಾಹುತಕ್ಕೆ ಕಾರಣವಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.
 
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯಗೂ ಜಯಲಲಿತಾಗೂ ಮದ್ವೆ