ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ವಿರೋಧಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.
ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಅನೇಕ ಕಡೆ ಕನ್ನಡ ಪರ ಸಂಘಟನೆಗಳು, ರೈತರು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಸ್ತೆ ತಡೆ ಮಾಡಿ, ವಾಹನಗಳನ್ನು ತಡೆದು ಪ್ರತಿಟನೆ ನಡೆಸುತ್ತಿದ್ದಾರೆ. ಇನ್ನು, ಬೆಂಗಳೂರು ಏರ್ ಪೋರ್ಟ್ ಬಳಿಯೂ ಕನ್ನಡ ಕಾರ್ಯಕರ್ತರು ಪ್ರತಿಟನೆ ನಡೆಸಿದ್ದಾರೆ. ಏರ್ ಪೋರ್ಟ್ ಒಳನುಗ್ಗಿ ಮುತ್ತಿಗೆ ಹಾಕಲು ಪ್ರಯತ್ನಿಸಲಾಗಿದೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು, ಸ್ಯಾಂಡಲ್ ವುಡ್ ಕಲಾವಿದರೂ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಈಗಾಗಲೇ ನಟಿ ಪೂಜಾ ಗಾಂಧಿ, ಸುಂದರ್ ರಾಜ್ ಈಗಾಗಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಸುಮಾರು 500 ಕ್ಕೂ ಹೆಚ್ಚು ಕಲಾವಿದರು ಇಂದು ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.