Publish Date: Fri, 09 Sep 2016 (13:21 IST)
Updated Date: Fri, 09 Sep 2016 (13:26 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾಗೂ ಮದ್ವೆ ಮಾಡಿಸಿದ ಘಟನೆ ನಡೆದಿದೆ.
ಕರ್ನಾಟಕ ಬಂದ್ ಅಂಗವಾಗಿ ಅಣುಕು ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾಗೂ ಮದ್ವೆ ಮಾಡಿಸಿ ಘೋಷಣೆಗಳನ್ನು ಕೂಗಿದರು.
ಸುಪೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಇಂದಿನ ಕರ್ನಾಟಕ್ ಬಂದ್ ಸಂದರ್ಭದಲ್ಲಿ ಸೇರಿದ ಸಾವಿರಾರು ಪ್ರತಿಭಟನಾಕಾರರು ತಮಿಳುನಾಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪದೇ ಪದೇ ಕಾವೇರಿ ನೀರಿಗಾಗಿ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರಕಾರಕ್ಕೆ ತಕ್ಕ ಪಾಠ ಕಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ