Webdunia - Bharat's app for daily news and videos

Install App

ದೇಶದಲ್ಲಿಯೇ ರೈತರ ಸಾಲ ಮನ್ನಾ ಮಾಡಿದ ನಾಲ್ಕನೇ ರಾಜ್ಯ ಕರ್ನಾಟಕ

Webdunia
ಬುಧವಾರ, 21 ಜೂನ್ 2017 (18:40 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಘೋಷಿಸುತ್ತಿದ್ದಂತೆ, ಸಾಲ ಮನ್ನಾ ಘೋಷಿಸಿದ ದೇಶದ ನಾಲ್ಕನೇ ರಾಜ್ಯ ಎನ್ನುವ ಹೆಗ್ಗಳಿಕೆಗೆ ಗುರಿಯಾಗಿದೆ.  
 
ತಾತ್ಕಾಲಿಕವಾಗಿಯಾದರೂ ವಿಪಕ್ಷಗಳನ್ನು ಹಿಂದಕ್ಕೆ ತಳ್ಳಲು ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಕಲಾಪದಲ್ಲಿ ಅಚ್ಚರಿಯ ರೀತಿಯಲ್ಲಿ ರೈತರ ಸಾಲ ಮನ್ನಾ ಘೋಷಿಸಿದರು. ಪ್ರಮುಖ ವಿಪಕ್ಷವಾದ ಬಿಜೆಪಿ ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.  
 
ಇದರೊಂದಿಗೆ ಉತ್ತರಪ್ರದೇಶ, ಪಂಜಾಬ್ ಮತ್ತು ಮಹಾರಾಷ್ಟ್ರ ನಂತರ ರೈತರ ಸಾಲ ಮನ್ನಾ ಮಾಡಿದ ಕರ್ನಾಟಕ ನಾಲ್ಕನೇ ರಾಜ್ಯವಾಗಿದೆ. 
 
ಕಳೆದ ಮೂರು ವರ್ಷಗಳಿಂದ ಭೀಕರ ಬರಗಾಲದಿಂದ ತತ್ತರಿಸಿ ಸಂಕಷ್ಟವನ್ನು ಎದುರಿಸುತ್ತಿರುವ ರೈತರಿಗೆ, ಸಾಲ ಮನ್ನಾ ಘೋಷಣೆಯಿಂದಾಗಿ ರಾಜ್ಯದ 22 ಲಕ್ಷ ರೈತರಿಗೆ ಲಾಭವಾಗಲಿದ್ದು, ರಾಜ್ಯ ಸರಕಾರಕ್ಕೆ 8165 ಕೋಟಿ ರೂಪಾಯಿ ಹೊರೆಯಾಗಲಿದೆ. 
 
ರಾಜ್ಯ ಸರ್ಕಾರವು ಕೃಷಿ ಸಾಲದ ಮನ್ನಾಗಾಗಿ ಒತ್ತಡಕ್ಕೊಳಗಾಗಲು ತಮ್ಮ ನಿರಂತರ ಅಭಿಯಾನದ ಕಾರಣ ಎಂದು ಬಿಜೆಪಿ ಹೇಳಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜುಲೈ ತಿಂಗಳಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ  ಮೂರು ದಿನಗಳ ಕಾಲ ನಿರಶನ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದರು. 
 
ಸಿಎಂ ಸಿದ್ದರಾಮಯ್ಯ ನಿರ್ಧಾರ ಸ್ವಾಗತಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ 3 ಸಾವಿರ ಕೋಟಿ ಸಾಲ ಮನ್ನಾ ಮಾಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ತನ್ನಿ ಎಂದು ಸಿಎಂ ಸಿದ್ದರಾಮಯ್ಯ ಪ್ರಮುಖ ವಿಪಕ್ಷವಾದ ಬಿಜೆಪಿಗೆ ಸವಾಲ್‌ ಹಾಕಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments