ಬೆಂಗಳೂರು: ರಸ್ತೆ ಗುಡಿಸುವ ಯಂತ್ರಗಳನ್ನು 7 ವರ್ಷಗಳಿಗೆ ಗುತ್ತಿಗೆ ಪಡೆಯು ರಾಜ್ಯ ಸರ್ಕಾರ 613 ಕೋಟಿ ರೂ. ಪೋಲು ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ ಘಟಕ ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳ ಹಳವಂಡಗಳಲ್ಲೇ ಬಿದ್ದು ಒದ್ದಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭಾರೀ ಹಗರಣ ಬಯಲಾಗಿದೆ.
ಲೂಟಿ ಹೊಡೆಯುವುದಕ್ಕೆ ಅಂತಾನೇ ಕಾದು ಕುಳಿತಿರುವ ಸಿದ್ದರಾಮಯ್ಯನವರ ಸರ್ಕಾರ 46 ರಸ್ತೆ ಗುಡಿಸುವ ಯಂತ್ರಗಳನ್ನು 7 ವರ್ಷಗಳಿಗೆ ₹613 ಕೋಟಿ ವ್ಯಯಿಸಿ ಗುತ್ತಿಗೆ ಪಡೆಯಲು ಮುಂದಾಗಿರುವುದು ನಿಜಕ್ಕೂ ಬೆಚ್ಚಿ ಬೀಳಿಸುವಂತದ್ದು.!
ಮಾರುಕಟ್ಟೆ ದರದಂತೆ ಒಟ್ಟು 46 ಯಂತ್ರಗಳ ಖರೀದಿ ವೆಚ್ಚ ಸುಮಾರು 100 ಕೋಟಿ ಆಗಲಿದೆ. ಆದರೆ, ಲೂಟಿಕೋರ ಸರ್ಕಾರ ₹613 ಕೋಟಿ ವೆಚ್ಚದಲ್ಲಿ ಒಪ್ಪಂದ ಮಾಡಿಕೊಂಡು ನೂರಾರು ಕೋಟಿ ನುಂಗುವುದಕ್ಕೆ ಹೊಂಚು ಹಾಕಿ ಕುಳಿತಿದೆ. ಹಾಗಾದ್ರೆ, ಉಳಿದ ₹500 ಕೋಟಿಗೂ ಅಧಿಕ ಹಣ ಎಲ್ಲಿ ಹೋಗುತ್ತಿದೆ? ಯಾರ ಜೇಬು ಸೇರುತ್ತೆ? ಎಂದು ಪ್ರಶ್ನೆ ಮಾಡಿದೆ.