Publish Date: Tue, 17 Jun 2025 (14:32 IST)
Updated Date: Tue, 17 Jun 2025 (14:38 IST)
ಬೆಂಗಳೂರು: ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಇಂದು ಬಂಧಿಸಿದರು.
ಆರ್.ಸಿ.ಬಿ. ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಸಿಎಂ ಮನೆಗೆ ಮುತ್ತಿಗೆ ಯತ್ನ- ಬಂಧನ
ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.