ಬೆಂಗಳೂರು: ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ, ಆರ್ ಜೆಡಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಕರ್ನಾಟಕ ಬಿಜೆಪಿ ನಾಯಕರು ಇಂದು ಲಾಡು ಹಂಚಿ ಕುಣಿದು ಕುಪ್ಪಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಭ್ರಮಾಚರಣೆಯಲ್ಲಿ ಬಿಜೆಪಿ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಭಾಗಿಯಾಗಿದ್ದರು.
ಪರಸ್ಪರ ಸಿಹಿ ತಿನಿಸಿಕೊಂಡ ನಾಯಕರು ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ಇಂದು ಬಿಹಾರ, ನಾಳೆ ಕರ್ನಾಟಕ ಭಾರತ್ ಮಾತಾಕೀ ಜೈ ನರೇಂದ್ರ ಮೋದಿಜೀ ಕೀ ಜೈ ಎಂದು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.