Publish Date: Sun, 31 Dec 2017 (12:02 IST)
Updated Date: Sun, 31 Dec 2017 (12:04 IST)
ಬೆಂಗಳೂರು:ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪಕ್ಷ ಘೋಷಣೆ ಮಾಡಿದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಒಬ್ಬ ಕನ್ನಡಿಗನಾಗಿ ರಜನಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದಕ್ಕೆ ಅಭಿನಂದಿಸುತ್ತೇನೆ. ತಮಿಳುನಾಡಿನಲ್ಲಿ ರಜನಿ ರಾಜಕೀಯ ಪ್ರವೇಶ ಸುಂಟರಗಾಳಿ ಎಬ್ಬಿಸಲಿದೆ. ಶೀಘ್ರದಲ್ಲೇ ಅವರು ಬಿಜೆಪಿಗೆ ಬೆಂಬಲ ಕೊಡುವಂತಾಗಲಿ ಎಂದು ಹಾರೈಸಿದ್ದಾರೆ.
ಇನ್ನೊಂದೆಡೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ರಜನಿ ರಾಜಕೀಯ ಪ್ರವೇಶ ಕರ್ನಾಟಕ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರದು ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ರಜನಿ ರಾಜಕೀಯ ಪಕ್ಷದ ಘೋಷಣೆ ಸಂದರ್ಭ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ