ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರು

Krishnaveni K
ಬುಧವಾರ, 3 ಜುಲೈ 2024 (12:07 IST)
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲೆಂದು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ಜನಪ್ರತಿನಿಧಿಗಳನ್ನು ಪೊಲೀಸರು ತಡೆದರಲ್ಲದೆ ಬಂಧಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕುಮಾರಕೃಪಾ ವಸತಿ ಗೃಹದಿಂದ ಕಾಲ್ನಡಿಗೆ ಮೂಲಕ ಹೊರಟು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು. ಅದರಂತೆ, ಶಾಸಕರು, ಮೇಲ್ಮನೆ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ವಿಜಯೇಂದ್ರ, ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕರು ಹೊರಬರುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನೂ ಬಂಧಿಸಿದರು.

ಪಾದಯಾತ್ರೆ ಮೂಲಕ ಎಲ್ಲರೂ ಮುಂದುವರೆಯುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನು ಬಂಧಿಸಿದರು. ಇದೇವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು. ಶಾಸಕರು ‘ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ಕೂಗಿದರು. ಹಲವು ಜನಪ್ರತಿನಿಧಿಗಳನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದರು.

‘ಮೋಸ, ಅನ್ಯಾಯ ಅನ್ಯಾಯ’ ಎಂದು ಕೂಗಿದ ಆರ್.ಅಶೋಕ್ ಅವರು, ‘ಈ ಸರಕಾರದ ದೌರ್ಜನ್ಯವನ್ನು ಖಂಡಿಸುತ್ತೇನೆ; ವಿಪಕ್ಷ ನಾಯಕನಾಗಿ ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ’ ಎಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments