ಭಂಡ ಸರಕಾರ, ಭಂಡ ಸಿಎಂ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ: ವಿಜಯೇಂದ್ರ

Krishnaveni K
ಗುರುವಾರ, 3 ಏಪ್ರಿಲ್ 2025 (16:05 IST)
ಬೆಂಗಳೂರು: ರಾಜ್ಯದ ಭಂಡ ಸರಕಾರ, ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಹೋರಾಟ ನಿನ್ನೆಯಿಂದ ಆರಂಭವಾಗಿದೆ. ಇವತ್ತು ಮುಕ್ತಾಯವಾಗಿಲ್ಲ; ಇದು ಪ್ರಾರಂಭ ಅಷ್ಟೇ ಎಂದು ತಿಳಿಸಿದರು. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ ಎಂದು ನುಡಿದರು.

ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್‍ಗೆ ಮೊನ್ನೆ ರಾತ್ರಿ 2 ರೂ. ಹೆಚ್ಚಿಸಿದ ದುಷ್ಟರಿವರು ಎಂದು ಖಂಡಿಸಿದರು. ಇದು ಅಧಿಕಾರದ ಮದ ಎಂದು ಟೀಕಿಸಿದರು. ಅಹೋರಾತ್ರಿ ಧರಣಿಯು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಉತ್ಸಾಹ ತಂದು ಕೊಟ್ಟಿದೆ. ರೈತ ನಾಯಕ, ಹೋರಾಟಗಾರ ಯಡಿಯೂರಪ್ಪ ಅವರು ಸಹ ಹೋರಾಟದ ನೇತೃತ್ವ ವಹಿಸಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನಕ್ಕೆ ಒಳಪಟ್ಟಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು, ತಾಯಂದಿರೂ ಪಾಲ್ಗೊಂಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಮೂಲಕ ಇಡೀ ರಾಜ್ಯಕ್ಕೆ ನಮ್ಮ ಹೋರಾಟಕ್ಕೆ ಕಿಚ್ಚು ಹಚ್ಚಿದಂತಾಗಿದೆ. ಒಂದು ಪ್ರೇರಣೆ, ಶಕ್ತಿ ಲಭಿಸಿದೆ. 5ರಂದು ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ಇದೆ. ಏ. 7ರಂದು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಅಲ್ಲಿಂದ ನಮ್ಮ ಹೋರಾಟ ಮುಂದಕ್ಕೆ ಸಾಗುತ್ತದೆ ಎಂದರು.
ಯತ್ನಾಳ್ ಅವರು ಹಿರಿಯರಿದ್ದಾರೆ. ಅವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ; ಅವರು ಸ್ವತಂತ್ರರಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ರಾಜ್ಯ ಸರಕಾರದಿಂದ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸ: ಮಹೇಶ್ ಟೆಂಗಿನಕಾಯಿ

ಅಜಿತ್ ಪವಾರ್ ವಿಮಾನ ದುರಂತಕ್ಕೆ ಬಿಗ್ ಟ್ವಿಸ್ಟ್: ಕೊನೆಯ ಕ್ಷಣದಲ್ಲಿ ಆಗಿದ್ದೇನು

ಮುಂದಿನ ಸುದ್ದಿ
Show comments