Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಪ್ರಚಾರಕ್ಕೆ ರೀಲ್ಸ್ ಮೊರೆ ಹೋದ ಬಿಜೆಪಿ

Krishnaveni K
ಗುರುವಾರ, 11 ಏಪ್ರಿಲ್ 2024 (15:53 IST)
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರನ್ನು ಸೆಳೆಯುವ ಉದ್ದೇಶದಿಂದ ಎಲ್ಲಾ ಪಕ್ಷಗಳೂ ಏನೇನೋ ಸರ್ಕಸ್ ಮಾಡುತ್ತಿವೆ. ಇದೀಗ ರಾಜ್ಯ ಬಿಜೆಪಿಯೂ ಯುವ ಜನರಿಗೆ ಇಷ್ಟವಾಗುವ ತಂತ್ರವನ್ನೇ ಬಳಸಲು ಮುಂದಾಗಿದೆ.

ರಾಜ್ಯ ಬಿಜೆಪಿ ಘಟಕ ಲೋಕಸಭೆ ಚುನಾವಣೆಗೆ ರೀಲ್ಸ್ ಮೊರೆ ಹೋಗಿದೆ. ಇತ್ತೀಚೆಗಿನ ದಿನಗಳಲ್ಲಿ ಯುವ ಜನಾಂಗ ರೀಲ್ಸ್ ಮಾಡುವುದರಲ್ಲಿ ಭಾರೀ ಆಸಕ್ತಿ ಹೊಂದಿದೆ. ಹೀಗಾಗಿ ಬಿಜೆಪಿ ಘಟಕ ಅದೇ ತಂತ್ರವನ್ನು ಬಳಸಿ ಮತದಾರರನ್ನು ಸೆಳೆಯಲು ಮುಂದಾಗಿದೆ.

ಇಂದು ಚುನಾವಣಾ ಪ್ರಚಾರಕ್ಕೆ ರೀಲ್ಸ್, ವಿಡಿಯೋ, ಅಡಿಯೋ ಹಾಡುಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ. ಬಿಜೆಪಿ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ನಿರ್ಮಿಸಿರುವ ವಿಡಿಯೋ, ಆಡಿಯೋ ಹಾಡುಗಳು ಮತ್ತು ರೀಲ್‍ಗಳನ್ನು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬಿಡುಗಡೆ' ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್, ಶಾಸಕ ಎಸ್. ರಘು, ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕ ಅವಿನಾಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪ್ರಮುಖರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments