ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

Krishnaveni K
ಶನಿವಾರ, 16 ಆಗಸ್ಟ್ 2025 (10:26 IST)
ಬೆಂಗಳೂರು: ಬಿಜೆಪಿ ಯಲಹಂಕ ವತಿಯಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ನೆಲಮಂಗಲ ಟೋಲ್‍ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ “ಧರ್ಮಸ್ಥಳ ಚಲೋ” ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.

ಧರ್ಮಸ್ಥಳದಲ್ಲಿ ನೂರಾರು ಹತ್ಯೆ ನಡೆದಿದೆ ಎಂದು ಅನಾಮಿಕ ನೀಡಿದ ದೂರಿನನ್ವಯ ತನಿಖೆ ನಡೆಯುತ್ತಿದೆ. ಎಸ್ಐಟಿ ತಂಡಕ್ಕೆ ಇದುವರೆಗೆ ಅನಾಮಿಕ ದೂರುದಾರ ಹೇಳಿದಂತೆ ಮಹಿಳೆಯರ ಅಸ್ಥಿಪಂಜರ ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ಅನಾಮಿಕನ ವಿರುದ್ಧವೇ ಅನುಮಾನ ವ್ಯಕ್ತವಾಗುತ್ತಿದೆ.

ಇದೆಲ್ಲಾ ಹಿಂದೂಗಳ ಧಾರ್ಮಿಕ ಕೇಂದ್ರ ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡುವ ಕಮ್ಯುನಿಸ್ಟರ ಯತ್ನ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಚಲೋ ಅಭಿಯಾನ ಹಮ್ಮಿಕೊಂಡಿದೆ.

ಅದರಂಥೆ ಇಂದು ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು, ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಶಾಸಕ ಎಸ್.ಆರ್. ವಿಶ್ವನಾಥ್, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments