Webdunia - Bharat's app for daily news and videos

Install App

ಅನುದಾನ ಕೊಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಳೆ ಬೃಹತ್ ಪ್ರತಿಭಟನೆ

Krishnaveni K
ಸೋಮವಾರ, 27 ಮೇ 2024 (14:11 IST)
ಬೆಂಗಳೂರು: ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ ಎಂದು ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ತಿಳಿಸಿದರು.
 
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಳೆ ನೀರು ಎಲ್ಲ ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ. ನಗರದ ಹೊಂಡ-ಗುಂಡಿಗಳನ್ನು ಮುಚ್ಚಲೂ ಇವರ ಬಳಿ ದುಡ್ಡಿಲ್ಲ. ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ (ಮೇ 28) ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿವರಿಸಿದರು.
 
ಈ ಸರಕಾರ ಬಂದ ಬಳಿಕ ರಸ್ತೆ ಕಾಮಗಾರಿಗಳು ನಡೆದಿಲ್ಲ. ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯ ನಡೆದಿಲ್ಲ ಎಂದು ಟೀಕಿಸಿದರು. ಅಭಿವೃದ್ಧಿ ಕಾಮಗಾರಿಗಳನ್ನೇ ಮಾಡದ ಈ ಸರಕಾರದ ವಿರುದ್ಧ ಒಂದು ದೊಡ್ಡ ಪ್ರತಿಭಟನೆಯನ್ನು ನಾಳೆ ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಿದ್ದೇವೆ ಎಂದರು.

ಫ್ರೀಡಂ ಪಾರ್ಕಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಹೋರಾಟದಲ್ಲಿ ಬಿಜೆಪಿಯ ಬೆಂಗಳೂರಿನ ಎಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಬೆಂಗಳೂರು ಮಹಾನಗರದ ಕಮೀಷನರ್‍ಗೆ ಮನವಿಯೊಂದನ್ನು ಕೊಡುವ ಚಿಂತನೆ ನಡೆದಿದೆ ಎಂದು ತಿಳಿಸಿದರು. ಈ ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆಯ ನಮ್ಮ ಮಾಜಿ ಸದಸ್ಯರು, ಪಕ್ಷದ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments