Publish Date: Fri, 21 Sep 2018 (10:11 IST)
Updated Date: Fri, 21 Sep 2018 (10:12 IST)
ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಸೆಳೆಯಲು ಯತ್ನಿಸುತ್ತಿದೆ ಎಂಬ ಆರೋಪಗಳಿಗೆ ರಾಜ್ಯ ಬಿಜೆಪಿ ಟ್ವಿಟರ್ ಮೂಲಕ ತಿರುಗೇಟು ಕೊಟ್ಟಿದೆ.
ನಾವು ಯಾವುದೇ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ. ಪಕ್ಷಕ್ಕೆ ಸೆಳೆಯಲು ಯತ್ನಿಸಿಯೂ ಇಲ್ಲ ಎಂದು ಬಿಜೆಪಿ ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದೆ. ಆ ಮೂಲಕ ತನ್ನ ಪಕ್ಷದ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದೆ.
ವರ್ಗಾವಣೆ ದಂಧೆಯಲ್ಲಿ ತೊಡಗಿರುವ ಕಿಂಗ್ ಪಿನ್ ಹಸ್ತಕ್ಷೇಪ ಹಾಗೂ ಭ್ರಷ್ಟಾಚಾರದಲ್ಲಿ ನಿರತರಾಗಿರುವ ಕೊಳಕು ಆಡಳಿತದಿಂದಾಗಿ ನಿಮ್ಮ ಶಾಸಕರೇ ಬೇಸತ್ತಿದ್ದಾರೆ. ಧರ್ಮ ಒಡೆಯಲು ಹೋಗಿ ಜನತೆಯಿಂದ ಮೂಲೆಗೆ ತಳ್ಳಲ್ಪಟ್ಟಿರುವ ನಿಮಗೆ ನಮ್ಮನ್ನು ಕೋಮುವಾದಿಯೆಂದು ಕರೆಯುವ ನೈತಿಕತೆಯಿಲ್ಲ ಎಂದು ನೇರವಾಗಿ ಸಿದ್ದರಾಮಯ್ಯನವರ ಟ್ವೀಟ್ ಉಲ್ಲೇಖಿಸಿಯೇ ರಾಜ್ಯ ಬಿಜೆಪಿ ಟಾಂಗ್ ಕೊಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.