ಬೆಂಗಳೂರು: ಕರ್ನಾಟಕ ಬಜೆಟ್ 2025 ರಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ. ಅದೇನು ಇಲ್ಲಿದೆ ವಿವರ.
ಸಿಎಂ ಸಿದ್ದರಾಮಯ್ಯ ಈ ಬಜೆಟ್ ನಲ್ಲಿ ಮುಸ್ಲಿಮ್ ಸಮುದಾಯದವರಿಗೆ ಈಗಾಗಲೇ ಬೇರೆ ಕೊಡುಗೆಗಳನ್ನೂ ನೀಡಿದ್ದಾರೆ. ವಿಶೇಷವಾಗಿ ಮುಸ್ಲಿಮರ ಸ್ಮಶಾನ ಮತ್ತು ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು.
ಇದೀಗ ಮುಸ್ಲಿಂ ವಿದ್ಯಾರ್ಥಿಗಳಿಗೂ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಮೌಲಾನಾ ಅಬ್ದುಲ್ ಪಬ್ಲಿಕ್ ಶಾಲೆ ಯೋಜನೆಯಡಿ 100 ಉನ್ನತ ಶಾಲೆಗಳಿಗೆ ಮೂಲಸೌಕರ್ಯಾಭಿವೃದ್ಧಿಗಾಗಿ 400 ಕೋಟಿ ಅನುದಾನ ನೀಡಲಾಗಿದೆ. ಈ ಪೈಕಿ 100 ಕೋಟಿ ರೂ. ಈ ವರ್ಷ ಬಿಡುಗಡೆ ಮಾಡಲಾಗುತ್ತದೆ. ಮದರಸಾಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಬೋರ್ಡ್ ಸೌಲಭ್ಯಗಳೊಂದಿಗೆ ಎನ್ಐಒಎಸ್ ಮುಖಾಂತರ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದು.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಮೂಲಕ ಉದ್ಯೋಗ ಮತ್ತು ಕೌಶಲ್ಯ ತರಬೇತಿ ಯೋಜನೆ, ಉಳ್ಳಾಲದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಕಾಲೇಜು ಘೋಷಣೆ ಮಾಡಲಾಗಿದೆ.