Select Your Language

Notifications

webdunia
webdunia
webdunia
webdunia

ಬಜೆಟ್ ಅಧಿವೇಶನ ಯಾವಾಗ, ಬಜೆಟ್ ಮಂಡನೆ ಯಾವಾಗ ದಿನಾಂಕ ಘೋಷಣೆ

Siddaramaiah

Krishnaveni K

ಬೆಂಗಳೂರು , ಸೋಮವಾರ, 17 ಫೆಬ್ರವರಿ 2025 (15:09 IST)
ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಯಾವಾಗ ಮತ್ತು ಬಜೆಟ್ ಅಧಿವೇಶನ ಯಾವಾಗ ಎಂದು ಸಿಎಂ ಸಿದ್ದರಾಮಯ್ಯ ದಿನಾಂಕ ಘೋಷಣೆ ಮಾಡಿದ್ದಾರೆ.

ಈಗಾಗಲೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು ರಾಜ್ಯ ಬಜೆಟ್ ಮಂಡನೆ ಯಾವಾಗ ಎಂದು ಜನ ಎದಿರು ನೋಡುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆ ದಿನಾಂಕ ಘೋಷಣೆ ಮಾಡಿದ್ದಾರೆ.

ಮಾರ್ಚ್ 3 ರಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯದ ಈ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಘೋಷಣೆ ಮಾಡಿದ್ದಾರೆ. ಈ ಅಧಿವೇಶನದಲ್ಲಿ ಹಲವು ಮುಖ್ಯ ವಿಚಾರಗಳು ಚರ್ಚೆಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಬಜೆಟ್ ಮಂಡಿಸುವ ಸಲುವಾಗಿ ಈಗಾಗಲೇ ಸಿಎಂ ವಿವಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಡುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಹಣ ಹೊಂದಿಸುವುದು ಸರ್ಕಾರಕ್ಕೆ ಸವಾಲಾಗಿದೆ. ಇದನ್ನು ಹೇಗೆ ನಿಭಾಯಿಸುತ್ತಾರೆ ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈಲು ಹಳಿಯ ಕಬ್ಬಿಣ ಕದಿಯುತ್ತಿದ್ದ ಮಕ್ಕಳನ್ನು ಹಿಡಿದ ಸಿಬ್ಬಂದಿಗೆ ಸನ್ಮಾನ ಬದಲು ಕೇಸ್ (ವಿಡಿಯೋ)