Publish Date: Fri, 06 Mar 2026 (10:36 IST)
Updated Date: Fri, 06 Mar 2026 (10:37 IST)
ಬೆಂಗಳೂರು: ಈ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ 56 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಈ ಬಾರಿ ಬಜೆಟ್ ಗಾತ್ರ 40 ಸಾವಿರ ಕೋಟಿ ಹೆಚ್ಚಳವಾಗಿದೆ. ಈ ಬಾರಿ 4.4 ಲಕ್ಷ ಕೋಟಿ ಮೌಲ್ಯದ ಬಜೆಟ್ ಮಂಡಿಸಲಾಗುತ್ತಿದೆ. ಈ ಬಾರಿ ಬಜೆಟ್ ನಲ್ಲಿ ಮೂಲಸೌಕರ್ಯಾಭಿವೃದ್ಧಿ ಮತ್ತು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಮಗಳೂರಿನಲ್ಲಿ 1700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್, 5 ಮಹಾನಗರಪಾಲಿಕೆಗಳಿಗೆ 1255 ಕೋಟಿ ಅನುದಾನ, ರಸ್ತೆ ಅಭಿವೃದ್ಧಿಗೆ ಹಣ ಮೀಸಲಿಡಲಾಗಿದೆ. ಇತ್ತೀಚೆಗೆ ಯುವಕರು ಖಾಲಿ ಹುದ್ದೆ ಭರ್ತಿಗೆ ಪ್ರತಿಭಟನೆ ಮಾಡಿದ್ದರು. ಇದರ ಬೆನ್ನಲ್ಲೇ ಈ ಬಜೆಟ್ ನಲ್ಲಿ 56 ಸಾವಿರ ಖಾಲಿ ಹುದ್ದೆ ಭರ್ತಿಯ ಭರವಸೆ ನೀಡಲಾಗಿದೆ.
450 ಕೋಟಿ ರೂ. ವೆಚ್ಚದಲ್ಲಿ ಕೆಆರ್ ಪುರಂನಿಂದ ಸಿಲ್ಕ್ ಬೋರ್ಡ್ ವರೆಗೆ ರಿಂಗ್ ರೋಡ್ ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂ., ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ 34,929 ಕೋಟಿ ರೂ ಇಂಧನ ಇಲಾಖೆಗೆ 29,947 ಕೋಟಿ ರೂ., ನಗರರಾಭಿವೃದ್ಧಿ ಇಲಾಖೆಗೆ 22203 ಕೋಟಿ ರೂ, ನೀರಾವರಿಗೆ 22,436 ಕೋಟಿ ರೂ. ಅನುದಾನ ಘೋಷಿಸಲಾಗಿದೆ.