Select Your Language

Notifications

webdunia
webdunia
webdunia
webdunia

Karnataka Budget 2025: ಬಜೆಟ್ ನಲ್ಲಿ ಕೃಷಿಕರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು ಇಲ್ಲಿದೆ ಡೀಟೈಲ್ಸ್

Siddaramaiah

Krishnaveni K

ಬೆಂಗಳೂರು , ಶುಕ್ರವಾರ, 7 ಮಾರ್ಚ್ 2025 (12:27 IST)
ಬೆಂಗಳೂರು: ಕರ್ನಾಟಕ ಬಜೆಟ್ 2025 ರಲ್ಲಿ ಕೃಷಿ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಏನು ಕೊಡುಗೆಗಳನ್ನು ಕೊಟ್ಟಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಕೃಷಿಕರ ಅಭಿವೃಧ್ಧಿಗಾಗಿ ಈ ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಜೊತೆಗೆ ಗ್ರಾಮೀಣಾಭಿವೃದ್ಧಿಗೂ ಒತ್ತು ನೀಡಲಾಗಿದೆ. ರೈತರು ಮತ್ತು ಮೀನುಗಾರರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಯೋಜನೆಗಳನ್ನು ಘೋಷಣೆ ಮಾಡಿದೆ.

ಕೃಷಿಕರಿಗಾಗಿ ಈ ಬಜೆಟ್ ನಲ್ಲಿ 51,300 ಕೋಟಿ ರೂ. ಮೀಸಲಿಡಲಾಗಿದೆ. ಕೃಷಿ, ರೇಷ್ಮೆ ಬೆಳೆಗಾರರು, ಪಶುಸಂಗೋಪನೆ, ಮೀನುಗಾರಿಕೆ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಘೋಷಿಸಲಾಗಿದೆ. ರೈತ ಸಮೃದ್ಧಿ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಮಾಹಿತಿ ನೀಡುವುದು.

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ನೀಡಲಾಗುವುದು. ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥವಾಗಿ ಬಳಸಿ, ಮಳೆಯಾಶ್ರಿತ ಪ್ರದೇಶಗಳಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯ ಧನ ನೀಡಲಾಗುವುದು.

ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆಗೆ ಪ್ರೋತ್ಸಾಹ ನೀಡುವುದು. ರೈತರ ಆದಾಯ ಮತ್ತು ಪೌಷ್ಠಿಕ ಭದ್ರತೆ ಹೆಚ್ಚಿಸಲು 88 ಕೋಟಿ ರೂ.. ರಾಜ್ಯದಲ್ಲಿ ಸುಮಾರು 6,000 ಕಿರು ಆಹಾರ ಸಂಸ್ಕರಣಾ ಘಟಕ ಮತ್ತು 14 ಸಾಮಾನ್ಯ ಇನ್ ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಕೃಷಿ ಭಾಗ್ಯ ಯೋಜನೆಯಡಿ 12,000 ಕೃಷಿ ಹೊಂಡಗಳ ನಿರ್ಮಾಣ. ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆವಿಷ್ಕಾರಕ್ಕೆ ಒತ್ತು.

ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ. ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯಗಳನ್ನು ಸುಧಾರಿಸಲು ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಅನುಷ್ಠಾನಗೊಳಿಸುವುದು.

ರೈತರಿಗೆ ಮಣ್ಣು ಪರೀಕ್ಷೆ, ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಗುಣಮಟ್ಟ ಪರೀಕ್ಷಿಸಲು 58 ಪ್ರಯೋಗಾಲಯಗಳ ಸ್ಥಾಪನೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲೂಕಾಗಿ ಪರಿವರ್ತಿಸಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮಂಡ್ಯ ಜಿಲ್ಲೆಗಳಲ್ಲಿ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕರ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ಉ ಸಕ್ಕರೆ ಕಾರ್ಖಾನೆಗಳ ಸಹಯೋಗದಲ್ಲಿ ನಿರ್ಮಿಸುವುದು.

ಜೈವಿಕ ಕೃಷಿ ಪರಿಕರ ಸ್ಟಾರ್ಟ್ ಅಪ್ ಗಳು, ಪರಿಕರಗಳನ್ನು ರೈತರಿಗೆ ಸೂಕ್ತ ದರದಲ್ಲಿ ಸಿಗುವಂತೆ ಮಾಡುವುದು. ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ಅನುಮೋದನೆ. 25 ಕೋಟಿ ರೂ. ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿ ತರಗತಿಗಳನ್ನು ಆರಂಭಿಸುವುದು.

ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಮತ್ತು ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಹಬ್ ತಯಾರಿಸುವುದು.

ವಿಜಯಪುರ ಮುದ್ದೇಬಿಹಾಳ ತಾಲೂಕಿನಲ್ಲ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆದುಕೊಳ್ಳುವುದು.

ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿಗೊಳಿಸಲು ಈ ಸಾಲಿನಲ್ಲಿ 95 ಕೋಟಿ ರೂ. ಮೀಸಲು. ರಾಜ್ಯದ 20 ಜಿಐ ಟ್ಯಾಗ್ ಹೊಂದಿರುವ ಬೆಳೆಗಳು, ಇತರೆ ದೇಸೀ ತಳಿಗಳ ರಕ್ಷಣೆಗೆ ದೇಸೀ ತಳಿಗಳ ಬೀಜ ಬ್ಯಾಂಕ್ ಸ್ಥಾಪನೆ.

ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನ.  ಮಲೆನಾಡು ಜಿಲ್ಲೆಗಳ ಎಲೆ ಚುಕ್ಕೆ ರೋಗ ಬಾಧೆ ಸಸ್ಯ ಸಂರಕ್ಷಣಾ ಕ್ರಮಗಳಿಗೆ 62 ಕೋಟಿ ರೂ. ಬಿಡುಗಡೆ.

ರೇಷ್ಮೆ ಬೆಳೆ ವಿಸ್ತರಿಸಲು, ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ 55 ಕೋಟಿ ರೂ. ಅನುದಾನ ನೀಡಲಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

Karnataka Budget 2025: ಅನುದಾನವೆಲ್ಲಾ ಮಸ್ಲಿಂ, ಕ್ರಿಶ್ಚಿಯನ್ನರಿಗೆ, ಹಿಂದೂಗಳು ಟ್ಯಾಕ್ಸ್ ಕಟ್ಟಕ್ಕೆ ಮಾತ್ರವಾ: ಆಕ್ರೋಶ