Karnataka Budget: ದಾಖಲೆಯ 16ನೇ ಬಜೆಟ್‌ ಮಂಡನೆಗೆ ಸಿದ್ದರಾಮಯ್ಯ ಸಿದ್ಧತೆ

Sampriya
ಸೋಮವಾರ, 17 ಫೆಬ್ರವರಿ 2025 (15:57 IST)
Photo Courtesy X
ಬೆಂಗಳೂರು:ಕರ್ನಾಟಕದ ಬಜೆಟ್‌ ಮಂಡನೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಮುಂದಿನ ತಿಂಗಳು 7ರಂದು ಮುಖ್ಯಮಂತ್ರಿ ಮತ್ತು ಹಣಕಾಸು ಮಂತ್ರಿಯೂ ಆಗಿರುವ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 2025ನೇ ಸಾಲಿನ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. 7ರಂದು ಬಜೆಟ್ ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಅವರ ಭಾಷಣದ ಮೇಲೆ ಚರ್ಚೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಎಷ್ಟು ದಿನ ಅಧಿವೇಶನ ನಡೆಸಬೇಕು ಅನ್ನೋದನ್ನು ಕಲಾಪ ಸಲಹಾ ಸಮಿತಿ  ನಿರ್ಧಾರ ಮಾಡಲಿದೆ. ನನಗೆ ಕಾಲು ನೋವು ಇದ್ದರೂ ಮನೆಯಲ್ಲಿ ಕುಳಿತು ಬಜೆಟ್‌ ಸಿದ್ಧತೆ ಕುರಿತು ಇಲಾಖೆಗಳ ಸಭೆ ನಡೆಸಿದ್ದೇನೆ ಎಂದರು.

ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ. ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ಬೆಲೆ ಏರಿಕೆ ನಿಯಂತ್ರಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೊ ಅದು ಮಾಡುತ್ತೇವೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments