Select Your Language

Notifications

webdunia
webdunia
webdunia
webdunia

Karnataka By Election: ಕಾಂಗ್ರೆಸ್‌ ಗೆಲುವಿನ ಬಳಿಕ ಸಿಎಂ ಮೊದಲ ಪೋಸ್ಟ್‌

Karnataka By Election 2024, Chief Minister Siddarmaiah, Congress Victory

Sampriya

ಬೆಂಗಳೂರು , ಶನಿವಾರ, 23 ನವೆಂಬರ್ 2024 (15:44 IST)
ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮೊದಲು ಪ್ರತಿಕ್ರಿಯಿಸಿದರು.  ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ.
ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು

Share this Story:

Follow Webdunia kannada

ಮುಂದಿನ ಸುದ್ದಿ

Karnataka By Election Result: ಬಿಜೆಪಿ ಸೋಲಿಗೆ ಈ ವ್ಯಕ್ತಿನೇ ಕಾರಣ ಎಂದ ಬಸನಗೌಡ ಪಾಟೀಲ್‌