Webdunia - Bharat's app for daily news and videos

Install App

Karnataka Bye Election result: ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಗೆಲುವಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ

Krishnaveni K
ಶನಿವಾರ, 23 ನವೆಂಬರ್ 2024 (14:06 IST)
ಬೆಂಗಳೂರು: ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಭಳಿಕ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments