Webdunia - Bharat's app for daily news and videos

Install App

Karnataka bye election result: ಸಂಡೂರಿನಲ್ಲಿ ಅನ್ನಪೂರ್ಣಗೆ ಗೆಲುವು

Krishnaveni K
ಶನಿವಾರ, 23 ನವೆಂಬರ್ 2024 (11:28 IST)
ಸಂಡೂರು: ಕರ್ನಾಟಕ ವಿಧಾನಸಭೆ ಉಪಚುನಾವಣೆಯ ಪೈಕಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಇದೀಗ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಸಂಡೂರಿನಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ ಸೋಲಾಗಿದೆ. ಈ ಸೋಲಿನ ಬಳಿಕ ಮಾತನಾಡಿರುವ ಬಂಗಾರು ಹನುಮಂತು ಈ ಸೋಲಿಗೆ ನಾನೇ ಹೊಣೆ. ಇಲ್ಲಿ ಅಧರ್ಮ ಗೆಲುವು ಸಾಧಿಸಿದೆ. ಕಾಂಗ್ರೆಸ್ ನ ಹಣಬಲ ಮೇಲುಗೈ ಸಾಧಿಸಿದೆ. ಕುರುಬರ ಮತ ಮತ್ತು ಅಲ್ಪಸಂಖ್ಯಾತರ ಮತಗಳಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ ಎಂದಿದ್ದಾರೆ.

ಸಂಡೂರಿನಲ್ಲಿ ಈ ಬಾರಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇದೆಲ್ಲವೂ ಅನ್ನಪೂರ್ಣ ಗೆಲುವಿಗೆ ವರ್ಕೌಟ್ ಆಗಿದೆ. ಈ ಬಾರಿ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿದ್ದವು. ಅದರಂತೆಯೇ ಇಲ್ಲಿ ಫಲಿತಾಂಶ ಬಂದಿದೆ.

ಆದರೆ ಉಳಿದಂತೆ ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲೂ ಕಾಂಗ್ರೆಸ್ ಮುನ್ನಡೆಯಲ್ಲಿರುವುದು ಆಡಳಿತಾರೂಢ ಪಕ್ಷಕ್ಕೆ ಬಲ ಬಂದಂತಾಗಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಹಿನ್ನಡೆಯಲ್ಲಿದ್ದು, ಶಿಗ್ಗಾಂವಿಯಲ್ಲೂ ಭರತ್ ಬೊಮ್ಮಾಯಿ ಹಿನ್ನಡೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments