Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Krishnaveni K
ಮಂಗಳವಾರ, 10 ಜೂನ್ 2025 (16:26 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಸಚಿವ ಸಂಪುಟಕ್ಕೆ ಸರ್ಜರಿ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರೊಂದಿಗೆ ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡಲಿದ್ದು ಆ ಸಚಿವರು ಯಾರು ಇಲ್ಲಿದೆ ವಿವರ.

ರಾಜ್ಯದ ಕೆಲವು ಸಚಿವರು ಮಾತ್ರ ಸಕ್ರಿಯರಾಗಿ ಕೆಲಸ ಮಾಡುತ್ತಾರೆ. ಉಳಿದವರು ಸರ್ಕಾರದ ಪರವಾಗಿ ಮಾತನಾಡುವುದಿರಲಿ, ವಿಧಾನಸೌಧದ ಕಡೆಗೆ ತಲೆಯೂ ಹಾಕಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಕೆಲವು ಸಚಿವರು ಇಲ್ಲದ  ವಿವಾದಗಳನ್ನು ಮೈಮೇಲೆಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ಮಾಡಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ಅದರಂತೆ ಕೆಲವು ಸಚಿವರು ಸ್ಥಾನ ಕಳೆದುಕೊಳ್ಳಲಿದ್ದು, ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್, ಲಕ್ಷ್ಮಣ್ ಸವದಿ, ಬಿ ನಾಗೇಂದ್ರ, ನರೇಂದ್ರ ಸ್ವಾಮಿ, ಬಿಆರ್ ಪಾಟೀಲ್, ಕೆಎಂ ಶಿವಲಿಂಗೇಗೌಡ, ಎಂ ಕೃಷ್ಣಪ್ಪ, ಅಜಯ್ ಸಿಂಗ್, ತನ್ವೀರ್ ಸೇಠ್ ಮುಂತಾದವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

ಯಾರಿಗೆಲ್ಲಾ ಗೇಟ್ ಪಾಸ್ ಸಾಧ್ಯತೆ?
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಪೌರಾಡಳಿತ ಸಚಿವ ರಹೀಂ ಖಾನ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್, ಪಶುಸಂಗೋಪನೆ ಸಚಿವ ಕೆ ವೆಂಕಟೇಶ್, ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್, ಸಾಂಖ್ಯಿಕ ಮತ್ತು ಯೋಜನೆ ಸಚಿವ ಡಿ ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ. ಇನ್ನು, ಇತ್ತೀಚೆಗಿನ ದಿನಗಳಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ತೀವ್ರ ಟೀಕೆ ಕೇಳಿಬರುತ್ತಿದೆ. ಈ ಹಿನ್ನಲೆಯ್ಲಿ ಗೃಹಸಚಿವ ಜಿ ಪರಮೇಶ್ವರ್ ಖಾತೆ ಬದಲಾವಣೆಯಾಗುವ ಸಾಧ್ಯತೆಯಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments