Select Your Language

Notifications

webdunia
webdunia
webdunia
webdunia

ಸಿಎಂ ನಿವಾಸದ ಎದುರು ಬೆಂಬಲಿಗರ ದಂಡು, ಮೌನದ ನಡುವೆ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

CM Siddaramaiah Karnataka CM Change Row
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಾರೆ ಎಂಬ ವದಂತಿ ನಡುವೆ ಅದಕ್ಕೂ ಮೊದಲು ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಅವರು ಉಪಾಹಾರ ಕೂಟ ಆಯೋಜಿಸಿದ್ದಾರೆ. ಇಂದು ಬೆಳಗ್ಗೆ 9ಗಂಟೆಗೆ ಉಪಹಾರವನ್ನು ಆಯೋಜನೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕಕುತೂಹಲ ಮೂಡಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ, ತಮ್ಮ ರಾಜೀನಾಮೆ ನಿಲುವಿಗೆ ಕಾರಣ ಹಾಗೂ ಹೈಕಮಾಂಡ್ ನಿರ್ಧಾರದ ಬಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇನ್ನೂ ಮುಖ್ಯಮಂತ್ರಿ ಸಚಿವಾಲಯದಿಂದಲೂ ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಲೋಕಭವನಕ್ಕೆ ತೆರಳಲು ಸಿದ್ದರಾಮಯ್ಯ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರು ಬುಧವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನಾಳೆ (ಗುರುವಾರ) ಎಲ್ಲವನ್ನೂ ಮಾತನಾಡುತ್ತೇನೆ’ ಎಂದಷ್ಟೆ ಹೇಳಿದ್ದರು. 

ಅದರಂತೆ ಇಂದು ಸಿದ್ದರಾಮಯ್ಯ ನಡೆ ಬಗ್ಗೆ ಬಾರೀ ಕುತೂಹಲ ಮೂಡಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌