ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿ ವಿಮಾನ ಏರಿದ್ದು ಭಾರೀ ಕುತೂಹಲವನ್ನು ಮೂಡಿಸುತ್ತಿದೆ.
ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ, ಶಾಸಕ ರವಿ ಗಣಿಗ, ಶಾಸಕ ಉದಯ್ ಗೌಡ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದೆ. ಈ ಮೂಲಕ ದೆಹಲಿಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಬೆಳವಣಿಗೆ ಸಂಬಂಧ ಸಚಿವ ಶಾಸಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಗೆ ಸಮಯ ಕೇಳಿದ್ದಾರೆ.
ಇನ್ನೂ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಇಂದು 8 ಮಂದಿಯ ತಂಡ ಹಾಗೂ ನಾಳೆ 7 ಜನರ ತಂಡ ದೆಹಲಿಗೆ ಪ್ರಯಾಣ ಬೆಳೆಸಲು ಪ್ಲಾನ್ ಮಾಡಿಕೊಂಡಿದೆ.