Publish Date: Thu, 28 May 2026 (09:48 IST)
Updated Date: Thu, 28 May 2026 (09:51 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬ್ರೇಕ್ಫಾಸ್ಟ್ ಮೀಟಿಂಗ್ ಹಮ್ಮಿಕೊಳ್ಳುತ್ತಿರುವ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮನೆ ಮುಂದೆ ಅವರ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಇದರ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಎಲ್ಲ ಬೆಳವಣಿಗೆ ನೋಡಿದ್ರೆ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿರುವುದು ಪಕ್ಕಾ ಆಗಿದ್ದು, ಶಿವಕುಮಾರ್ ಮುಂದಿನ ಸಿಎಂ ಆಗಿ ಪಟ್ಟಕೇರುವುದು ಖಚಿತವಾಗಿದೆ. ಎರಡು ನಾಯಕರ ಕಚೇರಿ ಹಾಗೂ ಮನೆ ಮುಂದಿನ ಬೆಳವಣಿಗೆ ನೋಡಿದ್ರೆ, ಮುಂದಿನ ರಾಜ್ಯ ರಾಜಕಾರಣದ ಚಿತ್ರಣ ಸಂಪೂರ್ಣವಾಗಿ ಸಿಗುತ್ತಿದೆ.
ಹೈಕಮಾಂಡ್ ಭೇಟಿ ಬಳಿಕ ಸಿದ್ದರಾಮಯ್ಯ ಅವರು ರಾಜ್ಯ ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿರುವ ವದಂತಿ ನಡುವೆ ಸಿದ್ದರಾಮಯ್ಯ ಇಂದು ತಮ್ಮ ಕಾವೇರಿ ಸಿಎಂ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಕರೆದಿದ್ದಾರೆ.
ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಂ ಬಿ ಪಾಟೀಲ್ ಸೇರಿದಂತೆ ಎಲ್ಲ ಸಚಿವರು ಆಗಮಿಸುತ್ತಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ನಡೆಯನ್ನು ಹೇಳ, ಆ ಬಳಿಕ ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ