Publish Date: Mon, 23 Oct 2017 (19:06 IST)
Updated Date: Mon, 23 Oct 2017 (19:51 IST)
ಅಭಿವೃದ್ಧಿ ಕಾರ್ಯಗಳನ್ನು ವಿರೋಧಿಸುವ ರಾಜ್ಯಗಳಿಗೆ ಒಂದು ಬಿಡಿಗಾಸು ಹಣವನ್ನು ಕೇಂದ್ರಸರಕಾರದಿಂದ ಬಿಡುಗಡೆ ಮಾಡೋಲ್ಲ ಎನ್ನುವ ಪ್ರಧಾನಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ದೇಶದ ಪ್ರಧಾನಿಯಾಗಿ ಮೋದಿ ಇಂತಹ ಹೇಳಿಕೆಗಳನ್ನು ನೀಡಬಾರದು. ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರಕಾರ ರಾಜ್ಯಗಳಿಂದ ತೆರಿಗೆಯನ್ನು ಸಂಗ್ರಹಿಸುವುದಿಲ್ಲವೇ ಎನ್ನುವುದಕ್ಕೆ ಪ್ರಧಾನಿ ಮೋದಿ ಉತ್ತರ ನೀಡಲಿ ಎಂದು ಸವಾಲ್ ಹಾಕಿದ್ದಾರೆ.
ಬೆಳಗಾವಿ ವಿಭಾಗದಲ್ಲಿ ನಡೆಯಲಿರುವ ಮೈಹಿತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಧಾರವಾಡಕ್ಕೆ ತೆರಳುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಮ್ಮ ಸರಕಾರದ ಅವಧಿಯಲ್ಲಿ ಯಾವುದೇ ಹಗರಣವಿಲ್ಲ. ಮಾಜಿ ಸಿಎಂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಆಧಾರರಹಿತ ಆರೋಪಗಳನ್ನು ಮಾಡುವ ಹವ್ಯಾಸವಿದೆ.ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಲ್ಲಿದ್ದಲು ಹಗರಣದ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದರಿಂದ ನಾನು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.