Publish Date: Sat, 20 Apr 2024 (11:53 IST)
Updated Date: Sat, 20 Apr 2024 (11:59 IST)
ಬೆಂಗಳೂರು: ಮೋದಿ ಸರ್ಕಾರ ರಾಜ್ಯಕ್ಕೆ ಎಲ್ಲಾ ವಿಚಾರದಲ್ಲಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಚೊಂಬು ಹಿಡಿದು ಪ್ರತಿಭಟನೆ ಮಾಡಿದೆ.
ನಗರದ ಮೇಖ್ರಿ ಸರ್ಕಲ್ ನಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತು ಚೊಂಬು ಹಿಡಿದು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯಕ್ಕೆ ಬರ ಪರಿಹಾರ, ತೆರಿಗೆ ಹಂಚಿಕೆ ವಿಚಾರದಲ್ಲಿ ಮೋದಿ ಸರ್ಕಾರ ಚೊಂಬು ನೀಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜವಾಲ ರವರ ನೇತೃತ್ವದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬರದ ಪರಿಹಾರದ ವಿಚಾರ, ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಮಾಡಿ ಅನ್ಯಾಯ ವಿರುದ್ಧವಾಗಿ ಮೇಖ್ರಿ ಸರ್ಕಲ್ ನಲ್ಲಿ ಚೊಂಬು ಇಡಿದುಕೊಂಡು ಪ್ರತಿಭಟನೆ ಮಾಡಲಾಯಿತು.
ಈ ಪ್ರತಿಭಟನೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್, ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಗುಂದ್, ಬಿ.ಆರ್ ನಾಯ್ಡು, ಕೆಪಿಸಿಸಿ ಉಪಾಧ್ಯಕ್ಷ ಎಸ್ ಈ ಸುದೀಂಧ್ರ, ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೆಚ್.ಎಸ್ ಮಂಜುನಾಥ್ ಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.