Publish Date: Sun, 15 Apr 2018 (11:44 IST)
Updated Date: Sun, 15 Apr 2018 (11:45 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಮೊದಲು ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್ ರಾಜೀನಾಮೆ ನೀಡಿದ್ದಾರೆ.
ಹಿರಿಯ ನಾಯಕನ ರಾಜೀನಾಮೆ ಕರ್ನಾಟಕ ಕಾಂಗ್ರೆಸ್ ಗೆ ದೊಡ್ಡ ಆಘಾತ ನೀಡಿದೆ. ಟಿಕೆಟ್ ಹಂಚಿಕೆಯಲ್ಲಿನ ಅಸಮಾಧಾನದಿಂದಲೇ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಇಂದು ಕೋಲಾರದ ಅವರ ನಿವಾಸದ ಬಳಿ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳ ದಂಡು ನೆರೆದಿದ್ದು, ಸುದರ್ಶನ್ ಮನ ಒಲಿಸುವ ಕೆಲಸ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.