Select Your Language

Notifications

webdunia
webdunia
webdunia
webdunia

ಬಹಿರಂಗ ಹೇಳಿಕೆ ನೀಡುವ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ನಿಂದ ಎಚ್ಚರಿಕೆ ಸಂದೇಶ

Surjewala-Siddaramaiah-DK Shivakumar

Krishnaveni K

ಬೆಂಗಳೂರು , ಗುರುವಾರ, 16 ಜನವರಿ 2025 (09:42 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷದ ಒಳಜಗಳವನ್ನು ಬೀದಿಗೆ ತರುತ್ತಿರುವ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸುವ ಕೆಲಸ ಮಾಡಿದೆ.

ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ  ಹೈಕಮಾಂಡ್ ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ. ಈ ಸಂಬಂಧ ಅವರು ರಾಜ್ಯ ನಾಯಕರಿಗೆ ಹೈಕಮಾಂಡ್ ನೀಡಿರುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಆ ಪತ್ರದ ವಿವರ ಇಲ್ಲಿದೆ ನೋಡಿ:

•       ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ವರಿಷ್ಠರ ಅಭಿಪ್ರಾಯ.

 
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು, ವರಿಷ್ಠರಾದ ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು  ಅಥವಾ ಯಾರಾಗಬೇಕು? ಎಂಬಿತ್ಯಾದಿ ಎಲ್ಲ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು. ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ? ಎಂಬುದು ಪ್ರಶ್ನೆಯಾಗಿದೆ.   ಹಾಗೂ ಈಗಾಗಲೇ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಮತ್ತು ಉಪ ಮುಖ್ಯಮಂತ್ರಿ DK ಶಿವ ಕುಮಾರ್ ಯಾವುದೇ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವವರ ಸಂಪೂರ್ಣ ವರದಿ ಕೇಳಿದೆ
೧. ಜಿಲ್ಲಾ ಪ್ರವಾಸ ಹೋದಂತಹ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದಾರಾ? ಇಲ್ಲವಾ?

೨. ಪಕ್ಷದ ಸಂಘಟನೆಗೆ ಒತ್ತು ಕೊಡಲಾಗುತ್ತದೆಯೋ ಇಲ್ಲವೋ?
೩. ಪ್ರಣಾಳಿಕೆಯಲ್ಲಿ ಕೊಟ್ಟಿರುವ ಯೋಜನೆಗಳನ್ನು ಜಾರಿ ಮಾಡಲು ಇವರು ಪಕ್ಷ ಮತ್ತು ಸರ್ಕಾರ ಕ್ಕೆ ಸಹಕಾರ ಕೊಡುತ್ತಿದ್ದಾರೋ ಇಲ್ಲವೋ?
೪. ಇದಲ್ಲದೆ ತಮ್ಮ ಇಲಾಖೆಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದಾರಾ ಇಲ್ಲವಾ?
ಎಂಬಿತ್ಯಾದಿ ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್‌ ಈ ಸಂದರ್ಭದಲ್ಲಿ ಕೇಳಿದೆ. ಅಲ್ಲದೆ, ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೆ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈ ಕಮಾಂಡ್‌ ಸೂಚಿಸಿದೆ.

ಈಗಾಗಲೇ ಎಐಸಿಸಿ ಕರ್ನಾಟಕ ಉಸ್ತುವಾರಿ ಆಗಿರುವ ರಣದೀಪ್ ಸುರ್ಜೇವಾಲ ಅವರು ಪಕ್ಷದ ತಾಯಿ ಇದ್ದಂತೆ, ಸರ್ಕಾರ ಮಗು ಇದ್ದಂತೆ. ಯಾರೂ ಸಹ ಪಕ್ಷದ ಘನತೆಗೆ ಚ್ಯುತಿ ತರಬಾರದು ಎಂಬ ಸಂದೇಶವನ್ನು ನೀಡಿದ್ದಾಾರೆ. ಇದರ ಮಧ್ಯೆಯೂ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಕೆಲವು ಸಚಿವರು ಪದೇ ಪದೆ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಆದರೆ, ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ HC ಮಹದೇವಪ್ಪ ಅವರು ಪದೇ ಪದೆ ಮಾತನಾಡುತ್ತಿದ್ದು, ಹೈಕಮಾಂಡ್  ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ.ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ ಮೇಲೆಯೂ ಪದೇ ಪದೆ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಪರಿಣಾಮ ಬೀರಲಿದೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ.


ಹೀಗೆಂದು ರಾಜ್ಯ ನಾಯಕರಿಗೆ ಶಿಸ್ತು ಸಮಿತಿ ನೋಟಿಸ್ ನೀಡಲಾಗಿದೆ. ಹಾಗಿದ್ದರೂ ಕ್ಯಾರೇ ಎನ್ನದೇ ಕೆಲವು ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಮೃತಪಟ್ಟ ವ್ಯಕ್ತಿಗೆ ಕಣ್ಣೂರಿನಲ್ಲಿ ಜೀವಂತ: ಶವಾಗಾರದಲ್ಲಿ ನಡೆದಿದ್ದೇನು ಗೊತ್ತಾ