Daily Horoscope

Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

Karnataka Congress
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ಯೋಜನೆಗಳೂ ಕಾರಣ. ಆದರೆ ಈಗ ಕಾಂಗ್ರೆಸ್ ಶಾಸಕರಿಂದಲೇ ಗ್ಯಾರಂಟಿ ಬಗ್ಗೆ ಅಪಸ್ವರ ಕೇಳಿಬಂದಿದೆ.

ನಿನ್ನೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದೆ. ಈ ವೇಳೆ ಶಾಸಕರು ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸಮಸ್ಯೆಯಾಗುತ್ತಿದೆ. ಗ್ಯಾರಂಟಿ ಬಗ್ಗೆ ಪುನರ್ ಪರಿಶೀಲನೆ ನಡೆಸಿ ಎಂಬ ಸಲಹೆಗಳು ಬಂದಿವೆ. ಇದೀಗ ಗ್ಯಾರಂಟಿ ಯೋಜನೆಯ ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಮೂಡಿದೆ.

ಗ್ಯಾರಂಟಿ ಯೋಜನೆಗಳು ಇತ್ತೀಚೆಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸುತ್ತಿಲ್ಲ. ಗ್ಯಾರಂಟಿ ಯೋಜನೆಗಳೊಂದೇ ಜನರನ್ನು ಸೆಳೆಯಲಾರದು. ಅಭಿವೃದ್ಧಿ ಯೋಜನೆಗಳನ್ನು ಮಾಡಬೇಕು. ಅಭಿವೃದ್ಧಿ ಯೋಜನೆಗಳಿಗೆ ಹಣ ಕೊಡಿ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದರಿಂದಾಗಿ ಈಗ ಗ್ಯಾರಂಟಿ ಯೋಜನೆಗಳಿಂದ ಅಭವೃದ್ಧಿ ಯೋಜನೆಗಳು ಕುಂಠಿತವಾಗಿದೆ ಎನ್ನುವುದು ಶಾಸಕರೇ ಮನಗಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈಗ ಸರ್ಕಾರ ಯಾವ ನಿರ್ಧಾರಕ್ಕೆ ಬರುತ್ತದೆ ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ