Webdunia - Bharat's app for daily news and videos

Install App

ಇಂದು ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಖರ್ಗೆ ಅಳಿಯ, ಸಚಿವರ ಪುತ್ರರು

Krishnaveni K
ಬುಧವಾರ, 20 ಮಾರ್ಚ್ 2024 (10:56 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸುತ್ತಿದೆ.  ಈ ಪಟ್ಟಿಯಲ್ಲಿ ಶಾಸಕರು, ಸಚಿವರ ಮಕ್ಕಳಿಗೆ ಸ್ಥಾನ ಸಿಕ್ಕಿದೆ ಎನ್ನಲಾಗಿದೆ.

ನಿನ್ನೆ ದೆಹಲಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿ ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸಿದ್ದಾರೆ. ಈ ಪಟ್ಟಿಯಲ್ಲಿ 17 ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಾಗಿದೆ. ಇನ್ನುಳಿದ ನಾಲ್ಕು ಅಭ್ಯರ್ಥಿಗಳ ಆಯ್ಕೆ ಇನ್ನೂ ಬಾಕಿಯಿದೆ.

ಇದೀಗ ಮೈಸೂರು, ಚಿಕ್ಕಮಗಳೂರು, ಕಲಬುರಗಿ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಈ ಪೈಕಿ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಳಿಯ, ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರಿ, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾ ರೆಡ್ಡಿ ಪುತ್ರಿ ಸ್ಪರ್ಧಿಸುವುದು ಬಹುತೇಕ ಪಕ್ಕಾ ಎನ್ನಲಾಗಿದೆ.

ಇದೀಗ ಬೆಂಗಳೂರು ಉತ್ತರ, ಉತ್ತರ ಕನ್ನಡ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಕ್ಷೇತ್ರದ ಟಿಕೆಟ್ ಫೈನಲ್ ಆಗಬೇಕಿದೆ. ಇಂದು ಎರಡನೇ ಪಟ್ಟಿಯನ್ನು ಘೋಷಣೆ ಮಾಡುತ್ತಿರುವುದಾಗಿ ಸ್ವತಃ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ಮೊದಲು ಕರ್ನಾಟಕ 7 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಘೋಷಣೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments