ಬೆಂಗಳೂರು: ಬಿಹಾರದಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಬೆನ್ನಲ್ಲೇ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಬಿಹಾರದಲ್ಲಿ ಎನ್ ಡಿಎ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಂತೇ ಕಾಂಗ್ರೆಸ್ ನಾಯಕರು ಇದು ನ್ಯಾಯಯುತ ಚುನಾವಣೆಯಲ್ಲ. ಮತಗಳ್ಳತನದಿಂದ ಬಿಜೆಪಿ ಗೆದ್ದಿದೆ ಎಂದು ಆರೋಪ ಮಾಡಿದ್ದರು. ಆದರೆ ಇದೀಗ ಇಷ್ಟಕ್ಕೇ ಸುಮ್ಮನಾಗಿಲ್ಲ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಮತಗಳ್ಳತನದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.
ಚುನಾವಣೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಹೊಣೆ ಹೊತ್ತುಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಳಿಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.