Select Your Language

Notifications

webdunia
webdunia
webdunia
webdunia

ಕೋವಿಡ್ ಸಭೆ ನಾಳೆಗೆ ಮುಂದೂಡಿಕೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ?

ಕೋವಿಡ್ ಸಭೆ ನಾಳೆಗೆ ಮುಂದೂಡಿಕೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ?
bengaluru , ಶುಕ್ರವಾರ, 13 ಆಗಸ್ಟ್ 2021 (20:00 IST)
ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಯ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಜೊತೆಗೆ ರಾಜ್ಯದಲ್ಲಿ ಮತ್ತೆ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗುತ್ತಾ ಎನ್ನುವ ಕುತೂಹಲವನ್ನು ಮೂಡಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಳೆ ಸಂಜೆ 4 ಗಂಟೆಗೆ ಕೋವಿಡ್ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಕೊರೋನಾ ನಿಯಂತ್ರಣ ಕ್ರಮಗಳ ಕುರಿತಂತೆ ತಜ್ಞರೊಂದಿಗೆ ಚರ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಏರಿಕೆಯಾಗುತ್ತಿರುವಂತ ಕೊರೋನಾ ಕಂಟ್ರೋಲ್ ಕುರಿತಂತೆಯೂ ಚರ್ಚಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ನಿಯಂತ್ರಣಕ್ಕಾಗಿ ಮತ್ತೆ ಲಾಕ್ ಡೌನ್ ನಂತಹ ನಿರ್ಧಾರವನ್ನು ಮುಖ್ಯಮಂತ್ರಿ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಅಂದಹಾಗೇ.. ರಾಜ್ಯದಲ್ಲಿ ನಿನ್ನೆ ಕೊರೋನಾ ಸೋಂಕಿನ ಪ್ರಕರಣಗಳು ಮೂರು ಜಿಲ್ಲೆಗಳಲ್ಲಿ ಶೂನ್ಯವಾಗಿತ್ತು. ಅಲ್ಲದೇ ಕೆಲ ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದ್ದವು. ಈ ಮೂಲಕ 1,857 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿತ್ತು. 30 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಮೂವರು ಬಲಿ!