Publish Date: Thu, 23 Dec 2021 (08:53 IST)
Updated Date: Thu, 23 Dec 2021 (08:58 IST)
ಡಿಸೆಂಬರ್ 31ರಂದು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ನಾಳೆ ಸಭೆ ಕರೆದಿದೆ.
ಸಭೆಯಲ್ಲಿ ಬಂದ್‌ಗೆ ಬೆಂಬಲ ನೀಡುವ ಕುರಿತು ಚರ್ಚೆ ಯಾಗಲಿದೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ಬಂದ್ಗೆ ಬೆಂಬಲ ನೀಡುವ ಬಗ್ಗೆ ನಾವು ಇನ್ನೂ ನಿರ್ಧಾರ ಕೈಗೊಂಡಿಲ್ಲ. ನಾಳೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ ಕರವೇ ಅಧ್ಯಕ್ಷ ನಾರಾಯಣಗೌಡ.