Select Your Language

Notifications

webdunia
webdunia
webdunia
webdunia

ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕದಲ್ಲಿ ಹೊಸ ಬದಲಾವಣೆ ಇಲ್ಲಿ ಗಮನಿಸಿ

Student

Krishnaveni K

ಬೆಂಗಳೂರು , ಬುಧವಾರ, 9 ಅಕ್ಟೋಬರ್ 2024 (14:10 IST)
ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಪದ್ಧತಿಯನ್ನು ಕೈಬಿಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶೇ20 ರಷ್ಟು ಕೃಪಾಂಕ ನೀಡಲಾಗಿತ್ತು. ಇದರ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಯಾರನ್ನು ಕೇಳಿ ಈ ರೀತಿ ಕೃಪಾಂಕ ನೀಡಲಾಗಿದೆ ಎಂದು ಗರಂ ಆಗಿ ಪ್ರಶ್ನೆ ಮಾಡಿದ್ದರು. ಇದರ ಬೆನ್ನಲ್ಲೇ ಈ ವರ್ಷದಿಂದ ಕೃಪಾಂಕಕ್ಕೆ ಬ್ರೇಕ್ ಹಾಕಲಾಗಿದೆ.
  
ಕೃಪಾಂಕ ನೀಡಿಯೂ ಈ ವರ್ಷ ಶೇ.10 ರಷ್ಟು ಕಡಿಮೆ ಫಲಿತಾಂಶ ಬಂದಿತ್ತು. ಹೀಗಾಗಿ ಈ ವರ್ಷ ಕೃಪಾಂಕ ನೀಡದೇ ಇರಲು ತೀರ್ಮಾನಿಸಲಾಗಿದೆ. ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ ಹಿನ್ನಲೆಯಲ್ಲಿ ಕೃಪಾಂಕ ರದ್ದುಗೊಳಿಸಿ ಶಿಕ್ಷಣ ಸಚಿವರು ಆದೇಶ ನೀಡಿದ್ದಾರೆ.

ಕೃಪಾಂಕ ನೀಡಿದ್ದರಿಂದ ಹಲವು ವಿದ್ಯಾರ್ಥಿಗಳು ಫೇಲ್ ಆಗುವುದರಿಂದ ತಪ್ಪಿಸಿಕೊಂಡಿದ್ದಾರೆ. ಈ ಹಿಂದೆ ಕೊವಿಡ್ ಕಾರಣದಿಂದ ಕೃಪಾಂಕ ನೀಡಲಾಗುತ್ತಿತ್ತು. ಆದರೆ ಈಗ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು ಈಗ ಕೃಪಾಂಕ ನೀಡುವ ಅಗತ್ಯವೇನಿದೆ ಎಂಬ ಪ್ರಶ್ನೆಗಳು ಬಂದಿತ್ತು. ಈ ಹಿನ್ನಲೆಯಲ್ಲಿ ಬದಲಾವಣೆ ತರಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಖಾಸಗಿ ವಿಡಿಯೋ ಇಟ್ಟುಕೊಂಡಿದ್ದ ಶಾಸಕ ಮುನಿರತ್ನ ಮಾಡಿದ್ದೇನು ನೋಡಿ