ಬೆಂಗಳೂರು: ಮಕ್ಕಳು ಈ ತಪ್ಪು ಮಾಡಿದ್ರೆ ಇನ್ನು ತಂದೆ-ತಾಯಿಯ ಆಸ್ತಿಯಲ್ಲಿ ಪಾಲು ಸಿಗಲ್ಲ. ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ವಯಸ್ಸಾದ, ಅನಾರೋಗ್ಯ ಪೀಡಿತ ಪೋಷಕರನ್ನು ಕೆಲವು ಮಕ್ಕಳು ಆಸ್ಪತ್ರೆಯಲ್ಲೇ ಬಿಟ್ಟು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಮಕ್ಕಳು ನೋಡಲೂ ಬಾರದೇ ತಂದೆ, ತಾಯಿ ಇಳಿವಯಸ್ಸಿನಲ್ಲಿ ಅನಾಥರಾಗುತ್ತಿದ್ದಾರೆ.
ಈ ಕಾರಣಕ್ಕೆ ಇಂತಹ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ತಂದೆ, ತಾಯಿಯನ್ನು ನೋಡಿಕೊಳ್ಳದಿದ್ದರೆ ಆಸ್ತಿಯಲ್ಲಿ ಪಾಲು ಸಿಗಲ್ಲ ಎಂಬ ಮಾತನ್ನು ಇತ್ತೀಚೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಇದೀಗ ಶರಣ ಪ್ರಕಾಶ್ ಪಾಟೀಲ್ ಕೂಡಾ ಅದೇ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು 152 ಪ್ರಕರಣ ಕಂಡುಬಂದಿದೆ. ಉಳಿದ ಕೆಲವು ಜಿಲ್ಲೆಗಳಲ್ಲೂ ಇಂತಹ ಅನೇಕ ಘಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ಮಕ್ಕಳ ವರ್ತನೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.