Select Your Language

Notifications

webdunia
webdunia
webdunia
webdunia

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

R Ashoka

Krishnaveni K

ಬೆಂಗಳೂರು , ಸೋಮವಾರ, 28 ಜುಲೈ 2025 (11:59 IST)
ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಮುಂದಾಗಿರುವ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಹಣವಿಲ್ಲದಿದ್ದ ಮೇಲೆ ಗ್ಯಾರಂಟಿ ಯಾಕೆ ಘೋಷಿಸಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ‘ಪ್ರಸಕ್ತ ಸಾಲಿನ (2025-26) ಬಜೆಟ್ ನಲ್ಲಿ SCSP/TSP ಅಡಿ ಪರಿಶಿಷ್ಠ ಸಮುದಾಯಗಳಿಗೆ ಒದಗಿಸಿ ಒಟ್ಟು ₹42,017.51 ಕೋಕೋಟಿ ಅನುದಾನದಲ್ಲಿ  ₹11,896.84 ಕೋಟಿ ಹಣವನ್ನ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದೆ.

ಸ್ವಾಮಿ ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಸುಮ್ಮನೆ ಕಾಟಾಚಾರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡುವುದಾದರೂ ಯಾತಕ್ಕೆ? ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ?

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನ ಭ್ರಷ್ಟಾಚಾರದ ಮೂಲಕ ಲೂಟಿ ಹೊಡೆಯುತ್ತೀರಿ, ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಅನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ’ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ