ರಾಜ್ಯದಲ್ಲಿ ಮಳೆಯ ಅಬ್ಬರ

Webdunia
ಶುಕ್ರವಾರ, 15 ಅಕ್ಟೋಬರ್ 2021 (14:28 IST)
ಮೂರು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಇದೇ 17 ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ವರದಿ ಹೇಳಿದೆ.
ಮಹಾನಗರದಲ್ಲಿ ತಡರಾತ್ರಿ ಭಾರಿ ಮಳೆಯಾಗಿದೆ. ಇದರಿಂದ ಕೆಲವಾರು ಪ್ರದೇಶಗಳಲ್ಲಿ ಮನೆಗಳಿಗೆ ಭಾರಿ ಪ್ರಮಾಣದ ನೀರುನುಗ್ಗಿ ನಿವಾಸಿಗಳು ಆತಂಕದಿಂದಿದ್ದಾರೆ.
ನಿನ್ನೆ ರಾತ್ರಿ ಸಾಧಾರಣ ಮಳೆ ಆರಂಭವಾಗಿದೆ. ರಾತ್ರಿ ಒಂದು ಗಂಟೆ ನಂತರ ಕೆಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಮುಂಜಾನೆ 3 ರಿಂದ ಭಾರಿ ಮಳೆ ದಾಖಲಾಗಿದೆ. ನಗರದ ಪಶ್ಚಿಮ ಭಾಗದ ಲಕ್ಷ್ಮೀನಾರಾಯಣ ಪುರ. ಬಸವೇಶ್ವರನಗರ. ಗಾಯತ್ರಿ ನಗರಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಹಲವು ಮನೆಗಳ ನಿವಾಸಿಗಳು ತೀವ್ರ ಆತಂಕಿತರಾಗಿದ್ದಾರೆ. ಮಳೆನೀರನ್ನು ಹೊರ ಹಾಕುವುದರಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಯುವ ಕೃಷಿಕರು ಸಾವು

ಇಸ್ರೇಲ್ ಯುಎಸ್ ದಾಳಿಯಲ್ಲಿ ಗಾಯಗೊಂಡಿರುವ ಮೊಜ್ತಾಬಾ ಖಮೇನಿ ಆರೋಗ್ಯದ ಬಗ್ಗೆ ಹೊಸ ಅಪ್ಡೇಟ್‌

ಆಪ್ತರ ಜತೆ ಔತಣಕೂಟ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ಭವಿಷ್ಯದಲ್ಲಿ ಅಧಿಕಾರಿಗಳಬೇಕಿದ್ದವರ ಕಳ್ಳಾಟ ಪರೀಕ್ಷೆಯಲ್ಲಿ ಬಯಲು, Video

Karnataka Weather: ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌, ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ

ಮುಂದಿನ ಸುದ್ದಿ
Show comments