Select Your Language

Notifications

webdunia
webdunia
webdunia
webdunia

Karnataka:ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರಕ್ಕೆ ಛಾಟಿಯೇಟು ಕೊಟ್ಟ ಹೈಕೋರ್ಟ್ ತೀರ್ಪು

Court

Krishnaveni K

ಬೆಂಗಳೂರು , ಗುರುವಾರ, 29 ಮೇ 2025 (15:59 IST)
ಬೆಂಗಳೂರು: ಹುಬ್ಬಳ್ಳಿ ಗಲಭೆ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ ನೀಡಿದೆ. ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇದು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ ಮಾಡಿದಂತಾಗಿದೆ. ಕೆಲವು ದಿನಗಳ ಹಿಂದೆ ರಾಜ್ಯ ಸರ್ಕಾರ ಹುಬ್ಬಳ್ಳಿ ಗಲಭೆ ಕೇಸ್ ಸೇರಿದಂತೆ 43 ಪ್ರಮುಖ ಕೋಮುಗಲಭೆ ಕೇಸ್ ಗಳನ್ನು ಹಿಂಪಡೆದಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯವನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಪ್ರಮುಖ ಕೇಸ್ ಗಳನ್ನು ಹಿಂಪಡೆದಿದೆ. ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸ್ ವಾಹನದ ಮೇಲೆಯೇ ಹತ್ತಿ ಗಲಭೆಕೋರರು ದಾಂಧಲೆ ನಡೆಸಿದ್ದರು. ಎಲ್ಲಾ ಸಾಕ್ಷ್ಯಗಳಿದ್ದರೂ ಸರ್ಕಾರ ಕೇಸ್ ವಾಪಸ್ ಪಡೆದಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು.

ಇದೀಗ ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾ. ಕೆ.ವಿ. ಅರವಿಂದ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಇದು ಸಿದ್ದು ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರ ಇದೆ ಎಂದು ದರ್ಪ ತೋರಿದ್ರೆ ಚೆನ್ನಾಗಿರಲ್ಲ: ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ವಿಜಯೇಂದ್ರ