Select Your Language

Notifications

webdunia
webdunia
webdunia
webdunia

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ಕರ್ನಾಟಕ ಅತ್ಯಧಿಕ ಪ್ರತಿ ಬಂಡವಾಳ ಆದಾಯ

Sampriya

ಬೆಂಗಳೂರು , ಬುಧವಾರ, 23 ಜುಲೈ 2025 (16:56 IST)
ಬೆಂಗಳೂರು: ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಈ ಸಾಧನೆಯ ಶ್ರೇಯಸ್ಸು ನಮ್ಮ ಸರ್ಕಾರ ಜಾರಿಗೆ ಕೊಟ್ಟ ಗ್ಯಾರಂಟಿ ಯೋಜನೆಗಳಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ವಿಚಾರದ ಸಲುವಾಗಿ ಖುಷಿ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದ ತಲಾ ನಿವ್ವಳ ರಾಜ್ಯ ದೇಶಿಯ ಉತ್ಪನ್ನವು (ಎನ್‌ಎಸ್‌ಡಿಪಿ) 2,04,605 ರೂ. ಗೆ ತಲುಪಿದೆ ಎಂದು ಸಂಸತ್ತಿಗೆ ಕೇಂದ್ರ ಹಣಕಾಸು ಸಚಿವಾಲಯ ಸಲ್ಲಿಸಿದ ದತ್ತಾಂಶ ತಿಳಿಸಿದೆ. 

2014-15 ರಲ್ಲಿ ಕರ್ನಾಟಕದ ತಲಾದಾಯವು 1,05,697 ರೂ. ಇತ್ತು. ಇದೀಗ 10 ವರ್ಷಗಳಲ್ಲಿ ಶೇ.93.6 ರಷ್ಟು ಏರಿಕೆ ಕಂಡಿರುವುದು ಗಮನಾರ್ಹ ಸಂಗತಿ. 

ಈ ಸಾಧನೆಯ ಶ್ರೇಯಸ್ಸು ನಮ್ಮ ಸರ್ಕಾರ ಜಾರಿಗೆ ಕೊಟ್ಟ ಗ್ಯಾರಂಟಿ ಯೋಜನೆಗಳಿಗೆ ಸಲ್ಲುತ್ತದೆ. ರಾಜ್ಯದ ಪ್ರತೀ ಕುಟುಂಬಗಳಿಗೂ ತಿಂಗಳಿಗೆ 4-5 ಸಾವಿರ ರೂಪಾಯಿಯಿಂದ ವರ್ಷಕ್ಕೆ 60-70 ಸಾವಿರ ರೂಪಾಯಿ ನೇರವಾಗಿ ತಲುಪಿಸುವ ಮೂಲಕ ಪ್ರತೀ ಕುಟುಂಬವನ್ನೂ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುತ್ತಿದ್ದೇವೆ.‌

ಜನರಲ್ಲಿ ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿ, ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬಿ ಈ ಮೂಲಕ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಾಧಿಸಿ ತೋರಿಸಿದ್ದೇವೆ.

Share this Story:

Follow Webdunia kannada

ಮುಂದಿನ ಸುದ್ದಿ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌