Webdunia - Bharat's app for daily news and videos

Install App

ಎಲ್ಲ ವರ್ಗಗಳಿಗೂ ಶೇ.70 ರ ಮೀಸಲಾತಿ ಕೊಡ್ತೀವಿ: ಸಿದ್ದರಾಮಯ್ಯ

Webdunia
ಬುಧವಾರ, 30 ನವೆಂಬರ್ 2016 (09:17 IST)
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎನ್ನುವುದಕ್ಕೆ ಸರ್ಕಾರ ಬದ್ಧವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಶೇ.70 ರಷ್ಟು ಮೀಸಲಾತಿ ಎಲ್ಲ ವರ್ಗಗಳಿಗೂ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಡಿಸೆಂಬರ್ ಅಥವಾ 2017 ರ ಜನವರಿ ತಿಂಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಹೇಳಿದರು.
 
ವಿಧಾನಪರಿಷತ್ತಿನಲ್ಲಿ ಸದಸ್ಯರಾದ ವಿ.ಎಸ್. ಉಗ್ರಪ್ಪ, ಮೋಟಮ್ಮ, ಹೆಚ್.ಎಂ. ರೇವಣ್ಣ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಯ ಚಚೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು 2004-05ನೇ ಸಾಲಿನ ಬಜೆಟ್‍ನಲ್ಲಿ ತಾವು ಹಣಕಾಸು ಮಂತ್ರಿಯಾಗಿದ್ದಾಗ ಸಮಾಜದ ಎಲ್ಲ ಜನರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕೆಂದು ಕ್ರಮ ಕೈಗೊಂಡು ಹಣ ಮೀಸಲಿಟ್ಟಿದ್ದೆ. ಆದರೆ ಕಾರಣಾಂತರಗಳಿಂದ ಅದು ಹಾಗೇ ಉಳಿದು ನಾನು ಮುಖ್ಯಮಂತ್ರಿಯಾದ ಮೇಲೆ ಈ ಕುರಿತು ಕ್ರಮ ಕೈಗೊಂಡಿದ್ದೇನೆ. ಈಗ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದ್ದು, ಕಾಂತರಾಜು ನೇತೃತ್ವದ ಆಯೋಗ ಡಿಸೆಂಬರ್ ಅಥವಾ ಜನವರಿಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಅದನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುವುದೆಂದು ಹೇಳಿದರು. 
 
ಮುಂದಿನ ಅಧಿವೇಶನದಲ್ಲಿ ವರದಿಯನ್ನು ಸದನದಲ್ಲಿ ಮಂಡಿಸಲಾಗುವುದು. ಅದರಲ್ಲಿನ ಅಂಶಗಳಿಗೆ ಅನುಗುಣವಾಗಿ ಅಗತ್ಯವಿರುವ ಸಂವಿಧಾನ ತಿದ್ದುಪಡಿಯನ್ನು ಸದನದಿಂದ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ಸಹಕಾರವು ಬೇಕೆಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿಸ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸರ್ಕಾರದ ನಡೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 
 
ಪ್ರಸ್ತುತ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಶೇ.18, ಇತರೆ ಹಿಂದುಳಿದ ವರ್ಗಗಳಿಗೆ ಶೇ.32 ರಷ್ಟು ಮೀಸಲಾತಿ ಇದೆ. 2011 ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಗೆ ಶೇ.17.15 ಪರಿಶಿಷ್ಟ ಪಂಗಡಕ್ಕೆ ಶೇ.6.95 ಮೀಸಲಾತಿ ಸಿಗಬೇಕಾಗಿದೆ. ಹಿಂದುಳಿದ ವರ್ಗಗಳ ಜನಸಂಖ್ಯೆಯಲ್ಲಿಯೂ ಏರಿಕೆಯಾಗಿದೆ.

ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50 ರಿಂದ ಶೇ.70 ಕ್ಕೆ ಹೆಚ್ಚಳವಾಗಬೇಕಾಗಿದೆ. ಆದರೆ ಸುಪ್ರೀಂಕೋರ್ಟ್ ಎಲ್ಲಾ ವರ್ಗದ ಮೀಸಲಾತಿ ಶೇ.50 ಮೀರಬಾರದು ಎಂಬ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶೇ.50 ರಷ್ಟು ಮೀಸಲಾತಿಯನ್ನು ಮಾತ್ರ ಪ್ರಸ್ತುತ ಕಲ್ಪಿಸಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಬಂದ ನಂತರ ಜಾತಿವಾರು ಜನಸಂಖ್ಯೆಗನುಗುಣವಾಗಿ ಶೇ.70 ರಷ್ಟು ಮೀಸಲಾತಿ ಕಲ್ಪಿಸಿ ಸಂವಿಧಾನದ ಅನುಸೂಚಿ 9 ರಡಿ ಸೇರ್ಪಡೆಗೆ ಕೇಂದ್ರಕ್ಕೆ ಕಳುಹಿಸಲಾಗುವುದು. ಆಗ ವಿರೋಧ ಪಕ್ಷಗಳು ಕೇಂದ್ರದ ಮೇಲೆ ಒತ್ತಡ ಹೇರಿ ಸಾಮಾಜಿಕ ನ್ಯಾಯ ಜಾರಿಗೊಳಿಸಲು ಸಹಕರಿಬೇಕು ಎಂದರು.
 
ಇದಕ್ಕೂ ಮುನ್ನ ನಡೆದ ಚರ್ಚೆಯಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸದಸ್ಯರಾದ ವಿ.ಎಸ್. ಉಗ್ರಪ್ಪ, ಮೋಟಮ್ಮ, ಕೆ.ಬಿ. ಶಾಣಪ್ಪ, ಬಸವರಾಜ ಹೊರಟ್ಟಿ, ಕೆ.ಸಿ. ಕೊಂಡಯ್ಯ, ಹೆಚ್.ಎಂ. ರೇವಣ್ಣ, ಪುಟ್ಟಸ್ವಾಮಿ, ರಿಜ್ವಾನ್ ಅರ್ಷದ್ ಹಾಗೂ ಮತ್ತಿತರರು ಭಾಗವಹಿಸಿ ತಮ್ಮ ವಾದಗಳನ್ನು ಮಂಡಿಸಿದರು. 
 
ವಿರೋಧ ಪಕ್ಷದ ಸದಸ್ಯರು ಬರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರ ಮೀಸಲಾತಿಯನ್ನು ಶೇ.70ಕ್ಕೆ ಹೆಚ್ಚಿಸುವ ವಿಧೇಯಕವನ್ನು ಮಂಡಿಸುವ ಭರವಸೆಯನ್ನು ನೀಡಬೇಕೆಂದು ಪಟ್ಟು ಹಿಡಿದಾಗ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆಗ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಸದನವನ್ನು ಕೆಲಕಾಲ ಮುಂದೂಡಬೇಕಾಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಪ್ರೀತಿಯ ಅಜ್ಜಿ ಎಂಬ ಬಿರುದು ಪಡೆದಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

ಮುಂದಿನ ಸುದ್ದಿ
Show comments