ಬೆಂಗಳೂರು: ರಾಜ್ಯ ರಾಜಧಾನಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಪಕ್ಕಾ ಕೂಲ್ ಕೂಲ್ ವಾತಾವರಣ. ಫೆಂಗಲ್ ಚಂಡಮಾರುತದ ಇಫೆಕ್ಟ್ ನಿಂದ ಮಳೆಯ ವಾತಾವರಣವಿರಲಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ತೀವ್ರ ಚಳಿಯ ವಾತಾವರಣವಿದೆ. ಇಂದು ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿದೆ. ಇದು ಪಕ್ಕಾ ಬೆಂಗಳೂರು ವಾತಾವರಣ ಎಂದೇ ಹೇಳಬಹುದು. ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ಭೂಕುಸಿತ ಭೀತಿಯಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.